ಮೈಸೂರು: ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಣಕ್ಕೆ ತರಲು ಮೈಸೂರಿನ ನರಸಿಂಹರಾಜ ಕ್ಷೇತ್ರವನ್ನು ಲಾಕ್‍ಡೌನ್ ಮಾಡುವ ಅವಶ್ಯಕತೆ ಇದೆ ಎಂದು ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ನರಸಿಂಹರಾಜ ಕ್ಷೇತ್ರ ಬೆಂಗಳೂರಿನ ಪಾದರಾಯನಪುರ ಆಗುತ್ತಾ ಎಂಬ ಆತಂಕ ವ್ಯಕ್ತಪಡಿಸಿದರು. ನರಸಿಂಹರಾಜ ಕ್ಷೇತ್ರದಲ್ಲಿ ಹೆಚ್ಚಿದ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಿವೆ. ಯಾಕಂದರೆ ಅಲ್ಲಿನ ಜನರು ಪರೀಕ್ಷೆಗೆ ಸಹಕಾರ ನೀಡುತ್ತಿಲ್ಲ. ಹೀಗಾಗಿ ನರಸಿಂಹರಾಜ ಕ್ಷೇತ್ರವನ್ನು ಲಾಕ್ ಡೌನ್ ಮಾಡುವ ಸಾಧ್ಯತೆ ಎಂದರು.
Advertisement
Advertisement
ಕ್ಷೇತ್ರದಲ್ಲಿ ಸಮುದಾಯ ಹರಡುವಿಕೆ ಆಗಿದೆ. ಸಂಪೂರ್ಣ ಕ್ಷೇತ್ರವನ್ನು ಮಿನಿ ಲಾಕ್ ಡೌನ್ ಮಾಡುವ ಅವಶ್ಯಕತೆ ಇದೆ. ಈ ಭಾಗದಲ್ಲಿ ಸೊಂಕಿತರು ಹಾಗೂ ಸಾವಿನ ಸಂಖ್ಯೆ ಜಾಸ್ತಿಯಾಗಿದೆ. ಇಲ್ಲಿನ ಜನರು ಪರೀಕ್ಷೆ ಮಾಡಿಸಿಕೊಳ್ಳಲು ಬರುತ್ತಿಲ್ಲ. ನಮ್ಮ ಅಧಿಕಾರಿಗಳಿಗೆ ಸಹಕಾರ ನೀಡುತ್ತಿಲ್ಲ. ಹೀಗಾಗಿ ಅಲ್ಲಿನ ಶಾಸಕರು ಇತರ ಮುಖಂಡರೊಂದಿಗೆ ಮಾತನಾಡಿ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದು ಅವರು ತಿಳಿಸಿದರು.
Advertisement
ಇದೇ ವೇಳೆ ಕೊರೊನಾ ವಿಚಾರದಲ್ಲಿ ಅವ್ಯವಹಾರ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದರು. ರೆಸಾರ್ಟ್‍ನಲ್ಲಿ ಕುಳಿತು ಆರೋಪಗಳನ್ನು ಮಾಡಬೇಡಿ. ವಿಧಾನಸೌಧಕ್ಕೆ ಬನ್ನಿ ನಿಮಗೆ ಬೇಕಾದ ದಾಖಲೆ ಕೊಡುತ್ತೇವೆ ಎಂದು ಸವಾಲೆಸೆದರು.
Advertisement
ಕೊರೊನಾ ವಿಚಾರದಲ್ಲಿ ಅವ್ಯವಹಾರ ಮಾಡುವವರು ಮನುಷ್ಯತ್ವ ಇಲ್ಲದವರು. ನಾವು ವೆಚ್ಚ ಮಾಡಿರುವುದೇ 550ಕೋಟಿ. ಹೀಗಿರುವಾಗ 2 ಸಾವಿರ ಕೋಟಿ ಅವ್ಯವಹಾರ ಎನ್ನುತ್ತಿದ್ದಾರೆ ಇದು ಹೇಗೆ ಸಾಧ್ಯ? ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಅಂತಾ ವಿರೋಧ ಮಾಡುತ್ತಿದ್ದಾರೆ. ಯಾವುದೇ ಅವ್ಯವಹಾರ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.