– ಬಿಯರ್ ಬಾಟಲ್‍ಗಳಿಂದ ಹಲ್ಲೆ
ಬೆಂಗಳೂರು: ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಣಿ ಕೊಲೆಯಾದ ಯುವಕ. ಆರೋಪಿಗಳಾದ ಕೃಷ್ಣಮೂರ್ತಿ, ಸಂದೀಪ್ ರೆಡ್ಡಿ ಹಾಗೂ ರೇವಣ ಸಿದ್ದಯ್ಯ ಸೇರಿ ಮಣಿಯನ್ನು ಕೊಲೆ ಮಾಡಿದ್ದಾರೆ. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೃತ ಮಣಿ ಆರೋಪಿಗಳಾದ ಕೃಷ್ಣಮೂರ್ತಿ, ಸಂದೀಪ್ ರೆಡ್ಡಿ ಹಾಗೂ ರೇವಣ ಸಿದ್ದಯ್ಯ ನಾಲ್ವರು ಸ್ನೇಹಿತರ ಮನೆಯಲ್ಲಿ ಪಾರ್ಟಿಗೆಂದು ಸೇರಿದ್ದರು. ಈ ವೇಳೆ ಕ್ಷುಲ್ಲಕ ವಿಚಾರಕ್ಕೆ ನಾಲ್ವರ ನಡುವೆ ಗಲಾಟೆ ಶುರುವಾಗಿ. ಗಲಾಟೆ ವಿಕೋಪಕ್ಕೆ ಹೋಗಿ ಕೃಷ್ಣಮೂರ್ತಿ, ಸಂದೀಪ್ ರೆಡ್ಡಿ ಹಾಗೂ ರೇವಣ ಸಿದ್ದಯ್ಯ ಮೂವರು ಸೇರಿ ಮಣಿ ಮೇಲೆ ಬಿಯರ್ ಬಾಟಲ್‍ಗಳಿಂದ ಹಲ್ಲೆ ಮಾಡಿದ್ದಾರೆ.
ಹಲ್ಲೆಗೊಳಗಾದ ಮಣಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮಾಹಿತಿ ತಿಳಿದು ಕೆಂಗೇರಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ನಂತರ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಮೂವರನ್ನು ಬಂಧಿಸಿದ್ದಾರೆ.