-ಮದ್ಯ ಕುಡಿಸಿ ಸ್ನೇಹಿತರಿಂದಲೇ ಅತ್ಯಾಚಾರ
ಲಕ್ನೋ: ಹುಟ್ಟುಹಬ್ಬದ ಪಾರ್ಟಿಗೆ ಬಂದಿದ್ದ 20 ವರ್ಷದ ಯುವತಿಯ ಮೇಲೆ ಗೆಳೆಯರು ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆದಿದೆ.
ಬೆನಿಗಂಜ್ ಮೂಲದ ಸಂತ್ರಸ್ತೆ ಬ್ಯೂಟಿಷಿಯನ್ ಆಗಿ ಕೆಲಸ ಮಾಡಿಕೊಂಡಿದ್ದರು. ಯುವತಿಯನ್ನ ಆಕೆಯ ಗೆಳೆಯರು ಸುಲೇಮ ಸರಾಯದಲ್ಲಿಯ ಬರ್ತ್ ಡೇ ಪಾರ್ಟಿಗೆ ಆಹ್ವಾನಿಸಿದ್ದರು. ಆಹ್ವಾನದ ಮೇರೆಗೆ ಯುವತಿ ಸಹ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಯುವತಿಗೆ ಮದ್ಯ ಕುಡಿಸಿದ ಗೆಳೆಯರು ಅತ್ಯಾಚಾರ ಎಸಗಿದ್ದಾರೆ.
ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಮಧ್ಯರಾತ್ರಿ ಧೂಮನ್‍ಗಂಜ್ ಪೊಲೀಸ್ ಠಾಣೆಗೆ ಆಗಮಿಸಿದ ಯುವತಿ ದೂರು ದಾಖಲಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಯಾರ ಬಂಧನವೂ ಆಗಿಲ್ಲ. ಶೀಘ್ರದಲ್ಲಿಯೇ ಆರೋಪಿಗಳನ್ನ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.