ತುಮಕೂರು: ಮಾರುಕಟ್ಟೆ ಅಭಿವೃದ್ಧಿಯ ದೃಷ್ಟಿಯಿಂದ ಪಾಲಿಕೆ ರಾತ್ರೋರಾತ್ರಿ ಗಣಪತಿ ದೇವಾಲಯವನ್ನು ನೆಲಸಮಗೊಳಿಸಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಬಾಳನಕಟ್ಟೆ ಬಳಿಯ ವಿನಾಯಕ ನಗರದ ಸಮೀಪದ ಹಳೇ ಮಾರ್ಕೆಟ್ ಬಳಿಯಿದ್ದ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನವನ್ನು ರಾತ್ರೋ ರಾತ್ರಿ ಎರಡು ಜೆಸಿಬಿಗಳ ಮೂಲಕ ನೆಲಸಮಗೊಳಿಸಲು ಮಹಾನಗರ ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ. ದೇವಾಲಯದ ಗರ್ಭಗುಡಿ ಹೊರತುಪಡಿಸಿ ಮಿಕ್ಕೆಲ್ಲಾ ಜಾಗವನ್ನು ಪಾಲಿಕೆ ಅಧಿಕಾರಿಗಳು ಧ್ವಂಸ ಮಾಡಿದ್ದಾರೆ.
Advertisement
Advertisement
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ, ಭಜರಂಗದಳ, ವಿಶ್ವ ಹಿಂದೂ ಪರಿಷತ್ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳು ಆಗಮಿಸಿದ ನಂತರ ಮಹಾನಗರ ಪಾಲಿಕೆ ಅಧಿಕಾರಿಗಳು ಕಾಲ್ಕಿತ್ತಿದ್ದಾರೆ. ಇದನ್ನೂ ಓದಿ: ವ್ಯಾಪಾರಿಗಳ ಮೇಲೆ ಖಾಕಿ ಖದರ್-ಕಾಲಿನಿಂದ ತರಕಾರಿ ಒದ್ದು ಪಿಎಸ್‍ಐ ದರ್ಪ
Advertisement
ದೇವಾಲಯದ ತೆರವಿಗೆ ಪಾಲಿಕೆ ಆಯುಕ್ತೆ ರೇಣುಕಾ ಸೇರಿದಂತೆ ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳು ದೇವಾಲಯ ತೆರವುಗೊಳಿಸಲು ಆದೇಸಿದ್ದರು ಎನ್ನಲಾಗಿದೆ. ರಾತ್ರಿ ವೇಳೆಯಲ್ಲಿ ಏಕಾಏಕಿ ದೇವಾಲಯ ತೆರವುಗೊಳಿಸಲು ಮುಂದಾದ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಸ್ಥಳಿಯರು ಮತ್ತು ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
Advertisement
ಸುಮಾರು 70 ವರ್ಷಗಳಷ್ಟು ಪುರಾತನವಾದ ಗಣಪತಿ ದೇವಾಲಯ ಇದಾಗಿದ್ದು, ಸ್ಮಾರ್ಟ್ ಸಿಟಿ ವತಿಯಿಂದ ಹಲವು ಕಾಮಗಾರಿಗಳ ನೆಪದಲ್ಲಿ ದೇವಾಲಯ ತೆರವಿಗೆ ಮುಂದಾಗಿದ್ದಾರೆ. ಘಟನೆ ವೇಳೆ ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಘಟನೆಗೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.