-ಒಂದು ಗಂಟೆ ಹಿಂದೆ ಜನಿಸಿದ ಮಗುವಿನ ರಕ್ಷಣೆ
ಬೆಂಗಳೂರು: ಪಾಳುಬಿದ್ದ ಜಾಗದಲ್ಲಿ ಪತ್ತೆಯಾದ ನವಜಾತ ಶಿಶುವನ್ನು ರಕ್ಷಣೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ನಗರದ ವಾಜರಹಳ್ಳಿ ರಸ್ತೆಯಲ್ಲಿ ನಡೆದಿದೆ.
ಸುಮಾರು ಒಂದು ಗಂಟೆ ಹಿಂದೆ ಹೆಣ್ಣು ಮಗು ಜನಿಸಿದೆ ಎನ್ನಲಾಗಿದ್ದು, ಕಂದಮ್ಮ ಅಳುವಿನ ಶಬ್ಧ ಕೇಳಿದ ಸ್ಥಳೀಯರು ನವಜಾತ ಶಿಶುವನ್ನು ರಕ್ಷಿಸಿದ್ದಾರೆ. ಮಗುವನ್ನು ರಕ್ಷಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಾಯಿಗಳ ದಾಳಿಗೆ ಒಳಗಾಗುತ್ತಿದ್ದ ಕಂದಮ್ಮ ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ಬದುಕಿ ಉಳಿದಿದೆ.
ಸ್ಥಳಕಾಗಮಿಸಿ ಪೊಲೀಸರು ಮಗುವನ್ನು ವಶಕ್ಕೆ ಪಡೆದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮಗುವಿನ ತಾಯಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.