ಬೆಂಗಳೂರು: ಕೊರೊನಾ ಪಾಸಿಟಿವ್ ಬಂದಿರುವ ಗರ್ಭಿಣಿಗೆ ಧೈರ್ಯ ತುಂಬಿ ಹೆರಿಗೆ ಮಾಡಿಸಿದ ವೈದ್ಯರಿಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅಭಿನಂದನೆ ಸಲ್ಲಿಸಿದ್ದಾರೆ.
Advertisement
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾದ ಕೋವಿಡ್ ಪಾಸಿಟಿವ್ ಗರ್ಭಿಣಿಗೆ ಧೈರ್ಯ ತುಂಬಿ ಹೆರಿಗೆ ಮಾಡಿಸಿದ ಡಾ. ಮಂಜುನಾಥ್ ದಳವಾಯಿ, ನರ್ಸ್, ರಾಣಿ ಲಖನಗೌಡ ಸೇರಿದಂತೆ ಎಲ್ಲಾ ವೈದ್ಯ ಸಿಬ್ಬಂದಿ ಕಾರ್ಯ ಶ್ಲಾಘನೀಯ. ಅವರಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.
Advertisement
Advertisement
ಕೊರೊನಾ ಮಹಾಮಾರಿ ರಾಜ್ಯಕ್ಕೆ ಕಾಲಿಟ್ಟ ಬಳಿಕ ಜನಜೀವನ ಅಸ್ತವ್ಯಸ್ತ ಆಗಿದೆ. ಸೂಕ್ತ ಸಮಯಕ್ಕೆ ಅಂಬುಲೆನ್ಸ್ ಬರದೆ ಹಲವು ಮಂದಿ ಮೃತಪಟ್ಟಿದ್ದಾರೆ. ಇನ್ನು ಕೆಲವೆಡೆಗಳಲ್ಲಿ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿ ಪ್ರಾಣಬಿಟ್ಟ ಘಟನೆಗಳು ಇವೆ. ಇವುಗಳ ಮಧ್ಯೆ ಕೊರೊನಾ ಪಾಸಿಟಿವ್ ಬಂದಿರುವ ಗರ್ಭಿಣಿಗೆ ಧೈರ್ಯ ತುಂಬಿ ಹೆರಿಗೆ ಮಾಡಿಸಿದ ವೈದ್ಯರು ನಿಜಕ್ಕೂ ಮಾದರಿಯಾಗಿದ್ದಾರೆ.
Advertisement
ಕೋವಿಡ್ ತುರ್ತುಪರಿಸ್ಥಿತಿಯಲ್ಲಿ ಬೆಳಗಾವಿ ಜಿಲ್ಲೆ ಖಾನಾಪುರ ತಾ, ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾದ ಕೋವಿಡ್ ಪಾಸಿಟಿವ್ ಗರ್ಭಿಣಿಗೆ ಧೈರ್ಯ ತುಂಬಿ ಹೆರಿಗೆ ಮಾಡಿಸಿದ ಡಾ. ಮಂಜುನಾಥ್ ದಳವಾಯಿ, ನರ್ಸ್, ರಾಣಿ ಲಖನಗೌಡ ಸೇರಿದಂತೆ ಎಲ್ಲಾ ವೈದ್ಯ ಸಿಬ್ಬಂದಿ ಕಾರ್ಯ ಶ್ಲಾಘನೀಯ. ಅವರಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು pic.twitter.com/kpaYEbx2Id
— Dr Sudhakar K (@mla_sudhakar) August 9, 2020