– ಬೆಳಗಾವಿ ಜಿಲ್ಲಾಡಳಿತದಿಂದ ಮತ್ತೊಂದು ಎಡವಟ್ಟು
ಬೆಳಗಾವಿ: ಚಿತೆಯ ಮೇಲೆ ಶವ ಬಿಸಾಡಿ ಟೀಕೆಗೆ ಗುರಿಯಾಗಿದ್ದ ಬೆಳಗಾವಿ ನಗರ ಪಾಲಿಕೆ ಮತ್ತು ಜಿಲ್ಲಾಡಳಿತ ಸದ್ಯ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. ಕೊರೊನಾ ಸೋಂಕಿತರ ಅಂತ್ಯ ಸಂಸ್ಕಾರ ವೇಳೆ ಪಿಪಿಇ ಕಿಟ್ ಇಲ್ಲದೇ ಸಿಬ್ಬಂದಿ ಓಡಾಟ ನಡೆಸಿರುವುದು ಕಂಡು ಬಂದಿದೆ.
Advertisement
ಬೆಳಗಾವಿಯಲ್ಲಿ ಕೊರೊನಾದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ಇದರ ನಡುವೆಯೇ ಕೋವಿಡ್ 19 ನಿರ್ವಹಣೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಎಡವಟ್ಟಿನ ಮೇಲೆ ಎಡವಟ್ಟು ಮಾಡಿಕೊಳ್ಳುತ್ತಿದೆ. ಬೆಳಗಾವಿಯ ಸದಾಶಿವನಗರ ಸ್ಮಶಾನದಲ್ಲಿ ಘಟನೆ ನಡೆದಿದ್ದು, ಸೋಂಕಿತರ ಮೃತದೇಹದ ಬಳಿ ಸ್ಮಶಾನದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಪಿಪಿಇ ಕಿಟ್ ಇಲ್ಲದೇ ಓಡಾಟ ನಡೆಸಿದ್ದರು. ಸಿಬ್ಬಂದಿಗೆ ಅಗತ್ಯ ಪಿಪಿಇ ಕಿಟ್‍ಗಳನ್ನು ಪೂರೈಕೆ ಮಾಡದೆ ಬೆಳಗಾವಿ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ. ಆ ಮೂಲಕ ಜಿಲ್ಲಾಡಳಿತ ಸಿಬ್ಬಂದಿಯನ್ನು ಅಪಾಯದ ಕೂಪಕ್ಕೆ ತಳ್ಳುತ್ತಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ.
Advertisement
ನಿನ್ನೆ ಸೋಂಕಿತರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಮೃತದೇಹ ಬಳಿ ಇಬ್ಬರು ಸಿಬ್ಬಂದಿ ಪಿಪಿಇ ಕಿಟ್ ಧರಿಸಿದೆ ಬಿಂದಾಸ್ ಓಡಾಟ ನಡೆಸಿದ್ದರು. ಕಿಟ್ ಇಲ್ಲದೇ ಇಬ್ಬರು ಸಿಬ್ಬಂದಿ ಓಡಾಟದ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿದೆ. ಸದ್ಯ ಸಾರ್ವಜನಿಕರು ಬೆಳಗಾವಿ ಜಿಲ್ಲಾಡಳಿತದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Advertisement
Advertisement
ಅಂತ್ಯ ಸಂಸ್ಕಾರ ನಡೆಸುವ ಸಿಬ್ಬಂದಿಗೆ ಪಿಪಿಇ ಕಿಟ್ ಯಾರು ನೀಡಬೇಕೆಂಬ ಗೊಂದಲ ಅಧಿಕಾರಿಗಳನ್ನು ಕಾಡುತ್ತಿದೆ. ಆಸ್ಪತ್ರೆಯ ಸಿಬ್ಬಂದಿಯೇ ಪಿಪಿಇ ಕಿಟ್ ನೀಡಬೇಕೆ? ಅಥವಾ ಪಾಲಿಕೆ ಅಧಿಕಾರಿಗಳು ಪಿಪಿಇ ಕಿಟ್ ಪೂರೈಕೆ ಮಾಡಬೇಕೆ? ಎಂಬ ಗೊಂದಲ ಅಧಿಕಾರಿಗಳಲ್ಲಿದೆ. ಪರಿಣಾಮ ಸ್ಮಶಾನದ ಕಾವಲುಗಾರ, ಆಂಬುಲೆನ್ಸ್ ಸಿಬ್ಬಂದಿ ಪಿಪಿಇ ಕಿಟ್ ಇಲ್ಲದೇ ಜೀವ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೆಲಸ ನಿರ್ವಹಿಸುತ್ತಿದ್ದರು ಸರಿಯಾದ ಸಮಯಕ್ಕೆ ಮಹಾನಗರ ಪಾಲಿಕೆ ಸಂಬಳ ನೀಡುತ್ತಿಲ್ಲ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.
ಇತ್ತ ನಿನ್ನೆ ಕೊರೊನಾ ಸೋಂಕಿತರ ಅಂತ್ಯಕ್ರಿಯೆಯನ್ನು ಬೇಕಾಬಿಟ್ಟಿ ಮಾಡಲಾಗಿತ್ತು. ಮಹಾನಗರ ಪಾಲಿಕೆಯ ಸದಾಶಿವ ನಗರ ಸ್ಮಶಾನದಲ್ಲಿ ಸೋಂಕಿತರ ಅಂತ್ಯಸಂಸ್ಕಾರ ಮಾಡಲಾಗಿತ್ತು. ಒಂದೇ ಆಂಬುಲೆನ್ಸ್ ನಲ್ಲಿ ಎರಡು ಮೃತದೇಹವನ್ನು ತಂದು ಚಿತೆಯ ಶವಗಳನ್ನು ಸಿಬ್ಬಂದಿ ಅಮಾನವೀಯವಾಗಿ ಎಸೆದು ಅಂತ್ಯಕ್ರಿಯೆ ಮಾಡಿದ್ದರು.