ಪಿಯುಸಿ ಸೀಟುಗಳ ಹೆಚ್ಚಳಕ್ಕೆ ಕ್ರಮ – ಸುರೇಶ್ ಕುಮಾರ್

Public TV
2 Min Read
SURESH KUMAR 2

ಬೆಂಗಳೂರು : ಈ ಬಾರಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪರೀಕ್ಷೆಗೆ ನೊಂದಾಯಿಸಿದ ಎಲ್ಲ ವಿದ್ಯಾರ್ಥಿಗಳನ್ನು ಪಿಯುಸಿ ತರಗತಿಗಳ ಪ್ರವೇಶಕ್ಕೆ ಅವಕಾಶ ನೀಡಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಕುರಿತು ರಾಜ್ಯದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಶುಕ್ರವಾರ ಡಿ.ಎಸ್.ಇ.ಆರ್.ಟಿ ಯಲ್ಲಿ “ಬನ್ನಿ ವಿದ್ಯಾರ್ಥಿಗಳೇ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಬರೆಯೋಣ” ಎಂಬ ಧ್ಯೇಯದೊಂದಿಗೆ ರಾಜ್ಯದ ಎಸ್‍ಎಸ್‍ಎಲ್‍ಸಿ ಪರೀಕ್ಷಾರ್ಥಿಗಳೊಂದಿಗೆ ವಿಡಿಯೋಕಾನ್ಫೆರೆನ್ಸ್ ಮೂಲಕ ನಡೆದ ಮುಕ್ತ ಸಂವಾದದಲ್ಲಿ ವಿದ್ಯಾರಥಿಗಳ ಪ್ರಶ್ನೆ/ ಸಲಹೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಎಲ್ಲರೂ ಪಾಸಾಗುವುದರಿಂದ ಪಿಯು ಪ್ರವೇಶ ಸಮಸ್ಯೆಯ ಕುರಿತು ಯಾರಿಗೂ ಯಾವುದೇ ಆತಂಕ ಬೇಡವೇ ಬೇಡ ಎಂದರು.

UDP SSLC EXAMS 4

“ಈಗಾಗಲೇ ವಿದ್ಯಾರ್ಥಿಗಳಾದ ನೀವು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧವಾಗಿರುವುದರಿಂದ ಧೈರ್ಯದಿಂದ ಪರೀಕ್ಷೆ ಬರೆಯುವುದರತ್ತ ಗಮನ ಹರಿಸಿ ನಾವು ನಿಮ್ಮನ್ನು ಪಿಯುಸಿ ತರಗತಿಗಳಿಗೆ ಪ್ರವೇಶ ನೀಡಲು ಎಲ್ಲ ವ್ಯವಸ್ಥೆ ಮಾಡುತ್ತೇವೆ” ಎಂದರು. ಇದನ್ನೂ ಓದಿ: ಸಿಇಟಿ- 2021 ಪರೀಕ್ಷೆಗೆ ಆನ್‍ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ರಾಜ್ಯದ ಸರ್ಕಾರಿ ಪಿಯು ಕಾಲೇಜಗಳಲ್ಲಿ ಪಿಯು ಸೀಟುಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಖಾಸಗಿ ಶಾಲೆಗಳಿಂದ ಪಿಯು ಸೀಟುಗಳ ಹೆಚ್ಚಳದ ಕೋರಿಕೆಗಳು ಬಂದರೆ ಪರಿಗಣಿಸಿ ಎಲ್ಲ ವಿದ್ಯಾರ್ಥಿಗಳಿಗೂ ಪಿಯುಸಿ ಸೀಟು ದೊರೆಯುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಶಾಲೆಗಳಿಗೆ ಕುಡಿಯುವ ನೀರು-ಶೌಚಾಲಯ ವ್ಯವಸ್ಥೆ:
ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆಗಳಿಲ್ಲದ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಈ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪಕವಾದ ಕಾರ್ಯಕ್ರಮವನ್ನು ಹಾಕಿಕೊಂಡಿದ್ದು, ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯೋನ್ಮುಖವಾಗಿದೆ ಎಂದು ಸಚಿವರು ಹೇಳಿದರು.

ಡಿವೈಸರ್ ಪೂರೈಕೆ- ಇಂಟರ್ನೆಟ್ ಬಲಪಡಿಸಲು ಕ್ರಮ:
ಗ್ರಾಮೀಣ ಪ್ರದೇಶದ ಹಲವಾರು ಮಕ್ಕಳು ಈ ಪರ್ಯಾಯ ಬೋಧನೆಯ ವಿಧಾನಗಳಾದ ದೂರದರ್ಶನ ಚಂದನಾ, ಮೊಬೈಲ್, ಲ್ಯಾಪ್ ಟಾಪ್ ಸೌಲಭ್ಯದ ಮೂಲಕ ನೀಡುವ ತರಗತಿಗಳಿಗೆ ಉಪಕರಣಗಳಿಲ್ಲದೇ ವಂಚಿತವಾಗಿದ್ದಾರೆ. ಹಾಗೆಯೇ ಈ ಸೌಲಭ್ಯವಿದ್ದವರಿಗೆ ಇಂಟರ್ನೆಟ್-ಅಂತರ್ಜಾಲ ವ್ಯವಸ್ಥೆ ಬಲಯುತವಾಗಿಲ್ಲದೇ ಇರುವುದರಿಂದ ತರಗತಿಗಳನ್ನು ಸರಿಯಾಗಿ ಆಲಿಸಲಾಗುತ್ತಿಲ್ಲ ಎಂಬ ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು ಈ ಕುರಿತು ಇಂತಹ ಸೌಲಭ್ಯಗಳನ್ನು ಹೇಗೆ ಒದಗಿಸಬೇಕೆಂಬ ಕುರಿತು ಚಿಂತನೆ ನಡೆಸುತ್ತಿದೆ. ಹಲವಾರು ತಾಲೂಕುಗಳಲ್ಲಿ ಬಿಇಒ ಹಂತದಲ್ಲಿ ಮೊಬೈಲ್ ಬ್ಯಾಂಕ್ ಮೂಲಕ ದಾನಿಗಳಿಂದ ಮೊಬೈಲ್ ಫೋನ್ಗಳನ್ನು ಸಂಗ್ರಹಿಸಲಾಗುತ್ತಿದೆ. ರೋಟರಿ ಮತ್ತಿತರ ಸಂಸ್ಥೆಗಳಿಂದ ಇದಕ್ಕೆ ಅಗತ್ಯವಾದ ಉಪಕರಣಗಳನ್ನು ಪಡೆಯಲು ಕ್ರಮ ವಹಿಸಲಾಗಿದೆ. ಹಾಗೆಯೇ ಗ್ರಾಮೀಣ ಪ್ರದೇಶಗಳಲ್ಲಿ ಇಂಟರ್ನೆಟ್ ಬಲಯುತಗೊಳಿಸಲು ಅನುವಾಗುವಂತೆ ಇಂಟರ್ನೆಟ್ ಒದಗಿಸುವ ಸಂಸ್ಥೆಗಳ ಸಭೆ ಕರೆದು ಚರ್ಚಿಸುವಂತೆ ಮುಖ್ಯಮಂತ್ರಿಗಳು ಮತ್ತು ಮುಖ್ಯ ಕಾರ್ಯದರ್ಶಿಯವರೊಂದಿಗೆ ಚರ್ಚಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

sslc exam 2

ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿ ಟಿ.ವಿ.:
ಗ್ರಾಮ ಪಂಚಾಯ್ತಿ ಗ್ರಂಥಾಲಯಗಳಲ್ಲಿ ಟಿ.ವಿ. ವ್ಯವಸ್ಥೆ ಮಾಡಿ ಅಲ್ಲಿಗೆ ಯಾರ ಮನೆಯಲ್ಲಿ ಟಿ.ವಿ. ಸೆಟ್ ಇಲ್ಲವೋ ಅಂತಹ ಮಕ್ಕಳು ತಮ್ಮ ತರಗತಿಗೆ ನಿಗದಿಪಡಿಸಿದ ಪಠ್ಯಗಳನ್ನು ದೂರದರ್ಶನ ಚಂದನಾ ವಾಹಿನಿ ವೀಕ್ಷಿಸುವಂತಹ ವೇದಿಕೆಯನ್ನು ಕಲ್ಪಿಸುವ ಕುರಿತು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು ಅದು ಪ್ರಗತಿಯಲ್ಲಿದೆ ಎಂದೂ ಸಚಿವರು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *