ಬೆಂಗಳೂರು: ಬೆಳಗಾವಿಯ ಪೀರನವಾಡಿನಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಗಲಾಟೆ ವಿಚಾರ ಸಂಬಂಧ ಪೊಲೀಸರು ದಾಖಲಿಸಿಕೊಂಡಿರುವ ಎಫ್‍ಐಆರ್ ಬಗ್ಗೆ ವಿಚಾರಣೆ ನಡೆಸಲು ಸೂಚಿಸಿರುವುದಾಗಿ ಗೃಹ ಸಚಿವ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಕನ್ನಡಿಗರ ಪರವಾಗಿದೆ ಅವರ ಹಿತರಕ್ಷಣೆಯನ್ನು ಕಾಪಾಡಲು ಬದ್ದವಾಗಿದೆ. ಬೆಳಗಾವಿಯ ಪೀರಣವಾಡಿನಲ್ಲಿ ಪೋಲಿಸರು ದಾಖಲು ಮಾಡಿಕೊಂಡಿರುವ FIR ಬಗ್ಗೆ ADGP (L&O) ಅವರಿಗೆ ವಿಚಾರಣೆ ಮಾಡಲು ಸೂಚಿಸಿದ್ದೇನೆ ಅವರು ಈಗಾಗಲೇ ಘಟನಾ ಸ್ಥಳದಲ್ಲಿದ್ದು ಶಾಂತಿ ಸಭೆಯನ್ನು ನಡೆಸಿ ಸಮಸ್ಯೆಯನ್ನು ಸೌಹಾರ್ದತೆಯಾಗಿ ಬಗೆಹರಿಸುವಂತೆ ಸೂಚಿಸಿದ್ದೇನೆ.
— Basavaraj S Bommai (@BSBommai) August 28, 2020
Advertisement
ಈ ಸಂಬಂಧ ಟ್ವೀಟ್ ಮಾಡಿರುವ ಸಚಿವರು, ರಾಜ್ಯ ಸರ್ಕಾರ ಕನ್ನಡಿಗರ ಪರವಾಗಿದೆ ಅವರ ಹಿತರಕ್ಷಣೆಯನ್ನು ಕಾಪಾಡಲು ಬದ್ಧವಾಗಿದೆ. ಬೆಳಗಾವಿಯ ಪೀರನವಾಡಿನಲ್ಲಿ ಪೋಲಿಸರು ದಾಖಲು ಮಾಡಿಕೊಂಡಿರುವ ಎಫ್‍ಐಆರ್ ಬಗ್ಗೆ ಎಡಿಜಿಪಿ (L&O) ಅವರಿಗೆ ವಿಚಾರಣೆ ಮಾಡಲು ಸೂಚಿಸಿದ್ದೇನೆ. ಅವರು ಈಗಾಗಲೇ ಘಟನಾ ಸ್ಥಳದಲ್ಲಿದ್ದು, ಶಾಂತಿ ಸಭೆಯನ್ನು ನಡೆಸಿ ಸಮಸ್ಯೆಯನ್ನು ಸೌಹಾರ್ದತೆಯಾಗಿ ಬಗೆಹರಿಸುವಂತೆ ಸೂಚಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.
Advertisement
Advertisement
ಕನ್ನಡಪರ ಹೋರಾಟಗಾರರು ಮತ್ತು ರಾಯಣ್ಣನ ಅಭಿಮಾನಿಗಳು ಪೀರನವಾಡಿಗೆ ತೆರಳಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಮಾಡಿ, ರಾಯಣ್ಣನಿಗೆ ಜೈಕಾರ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದರು.