ಧಾರವಾಡ: ದೇವರ ಪೂಜೆಗೆ ಹೋದಾಗ ಅತ್ಯಾಚಾರಕ್ಕೊಳಗಾಗಿದ್ದ ಅಪ್ರಾಪ್ತೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಪ್ರಾಪ್ತೆ ಗುರುವಾರ ಹೊಲದಲ್ಲಿನ ದೇವರಿಗೆ ಪೂಜೆ ಮಾಡಲು ತೆರಳಿದ್ದಳು. ಈ ವೇಳೆ ಗ್ರಾಮದ ಯುವಕ ಬೆದರಿಸಿ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಮರುದಿನ ಬಾಲಕಿ ತಾಯಿ ಬಳಿ ಹೊಲದಲ್ಲಿ ತನ್ನ ಮೇಲಾದ ಅತ್ಯಾಚಾರದ ಬಗ್ಗೆ ಹೇಳಿಕೊಂಡಿದ್ದಾಳೆ.
ಮರುದಿನ ವಿಷ ಸೇವಿಸಿದ್ದಾಳೆ. ಕೂಡಲೇ ಕುಟುಂಬಸ್ಥರು ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಇಂದು ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಜಿಲ್ಲಾಸ್ಪತ್ರೆಯ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಗರಗ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.