ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲೆ ಯಾವುದೇ ತೆರಿಗೆ ವಿಧಿಸದೇ ಇರಲು ಸರ್ಕಾರ ನಿರ್ಧರಿಸಿದೆ.
ಮೈತ್ರಿ ಸರ್ಕಾರದಲ್ಲಿ ಎಚ್‌ಡಿ ಕುಮಾರಸ್ವಾಮಿ ಮತ್ತು ಕಳೆದ ವರ್ಷ ಯಡಿಯೂರಪ್ಪ ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಮೇಲೆ 1 ರೂ. ಸೆಸ್ ವಿಧಿಸಿದ್ದರು. ಸರ್ಕಾರ ಬೊಕ್ಕಸಕ್ಕೆ ಆದಾಯ ತರುವ ಉದ್ದೇಶದಿಂದ ಸೆಸ್ ವಿಧಿಸುವುದು ಅನಿವಾರ್ಯ ಎಂದಿ ಸರ್ಕಾರಗಳು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿತ್ತು.
Advertisement
Advertisement
ಕೋವಿಡ್ 19 ನಂತರ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಭಾರೀ ಏರಿಕೆ ಆಗುತ್ತಿದೆ. ಹೀಗಾಗಿ ಬಜೆಟ್‌ನಲ್ಲಿ ಯಡಿಯೂರಪ್ಪನವರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ಕುತುಹೂಲ ಮೂಡಿತ್ತು.
Advertisement
ಜಿಎಸ್‌ಟಿ ಜಾರಿಯಾದ ಬಳಿಕ ರಾಜ್ಯ ಸರ್ಕಾರಗಳಿಗೆ ಆದಾಯ ಕೊರತೆಯಾಗುತ್ತಿದೆ. ಈ ನಿಟ್ಟಿನಲ್ಲಿ ತೈಲ ಇನ್ನೂ ಜಿಎಸ್‌ಟಿ ವ್ಯಾಪ್ತಿಗೆ ಸೇರದೇ ಇದ್ದ ಕಾರಣ ರಾಜ್ಯ ಸರ್ಕಾರಗಳು ಆದಾಯ ಹೆಚ್ಚಿಸುವ ದೃಷ್ಟಿಯಿಂದ ತೈಲಗಳ ಮೇಲೆ ಪ್ರತ್ಯೇಕ ಸೆಸ್ ವಿಧಿಸುತ್ತಿದ್ದವು.