ಧಾರವಾಡ: ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯ ಏರಿಕೆಯಾಗುತ್ತಿರುವುದನ್ನು ಖಂಡಿಸಿ ಕಟ್ಟಿಗೆ ಹೊರೆ ಹೊತ್ತು ಪ್ರತಿಭಟನೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆಯಾಗುತ್ತಲೇ ಇದ್ದು ಇದನ್ನು ಖಂಡಿಸಿ ಧಾರವಾಡದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು. ನಗರದ ವಿವೇಕಾನಂದ ವೃತ್ತದಲ್ಲಿ ಧಾರವಾಡ ಮಹಿಳಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಈ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ತಲೆ ಮೇಲೆ ಕಟ್ಟಿಗೆ ಹೊರೆ ಹೊತ್ತು ವಿನೂತನವಾಗಿ ಪ್ರತಿಭಟಿಸಿದ್ದಾರೆ.
ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿಲಿಂಡರ್ ಸಿಗಲ್ಲ, ಕಟ್ಟಿಗೆ ಖರೀದಿ ಮಾಡಿಕೊಂಡು ಇಟ್ಟುಕೊಳ್ಳಿ, ಸಿಲಿಂಡರ್ ಬೆಲೆ ಕೂಡಾ ಸಾಕಷ್ಟು ಏರಿಕೆಯಾಗಿದೆ ಎಂದು ಜನರಿಗೆ ಕಟ್ಟಿಗೆ ಕೊಟ್ಟು ಕಳಿಸಿದ್ದಾರೆ.