ಧಾರವಾಡ: ದಿನೇ ದಿನೇ ಪೆಟ್ರೋಲ್, ಡೀಸೆಲ್ ದರ ಹೆಚ್ಚಳವಾಗುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಹೆಗಲ ಮೇಲೆ ಬೈಕ್ ಹೊತ್ತುಕೊಂಡು ಬರುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಬೈಕ್ ಹೊತ್ತು ತಂದ ಕೈ ಕಾರ್ಯಕರ್ತರು, ಕೇಂದ್ರ ಸರ್ಕಾರ ಸತತ 19 ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಹೆಚ್ಚಳ ಮಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನ ವಿರೋಧಿ ಆಡಳಿತ ನಡೆಸುತ್ತಿವೆ. ಬೆಲೆ ಹೆಚ್ಚಳ ಮಾಡುವ ಮುಖಾಂತರ ಕೇಂದ್ರ ಸರ್ಕಾರ ಬಡವರ ಹಾಗೂ ಮಧ್ಯಮ ವರ್ಗದ ಜನರ ರಕ್ತ ಹೀರುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಇದನ್ನು ಓದಿ: 19ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ!
Advertisement
Advertisement
ಜಿಲ್ಲಾಧಿಕಾರಿ ಕಚೇರಿಗೆ ಬೈಕ್ ಗಳನ್ನು ಹೊತ್ತುಕೊಂಡು ಬರುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಕೂಡಲೇ ತೈಲ ಬೆಲೆ ಇಳಿಕೆ ಮಾಡುವಂತೆ ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಗಳಿಗೆ ಮನವಿ ಸಲ್ಲಿಸಿದರು.