– ಕೇಂದ್ರ ಸರ್ಕಾರ ಯಾವುದೇ ಹೊಸ ಸೆಸ್ ಹಾಕಿಲ್ಲ
ಶಿವಮೊಗ್ಗ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ತಾತ್ಕಾಲಿಕ ಹೆಚ್ಚಳ ಅಷ್ಟೇ. ಮುಂದಿನ ದಿನಗಳಲ್ಲಿ ನಿಯಂತ್ರಣಕ್ಕೆ ಬರಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರ ಒಟ್ಟಿಗೆ ಸೇರಿ ಪೆಟ್ರೋಲ್ ಹಾಗೂ ಡೀಸೆಲ್ ದರ ನಿಗದಿಪಡಿಸುತ್ತವೆ. ಆದರೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಹ ತೈಲ ಬೆಲೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿರುವುದರಿಂದ ರಾಷ್ಟ್ರ ಹಾಗೂ ರಾಜ್ಯದಲ್ಲಿ ತೈಲ ಬೆಲೆ ಏರಿಕೆ ಆಗುತ್ತಿದೆ ಎಂದರು.
Advertisement
Advertisement
ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಕೇಂದ್ರ ಸರ್ಕಾರ ಯಾವುದೇ ಹೊಸ ಸೆಸ್ ವಿಧಿಸಿಲ್ಲ. ಆದರೆ ಹೊಸ ಸೆಸ್ ವಿಧಿಸಿದೆ ಎಂಬ ಅಪ ಪ್ರಚಾರ ಆಗಿದೆ ಎಂದರು. ಅಂತರರಾಷ್ಟ್ರೀಯ ಮಟ್ಟದಲ್ಲಿನ ಏರಿಳಿತವೇ ಈ ತಾತ್ಕಾಲಿಕ ಹೆಚ್ಚಳಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಅದು ಸಹ ನಿಯಂತ್ರಣಕ್ಕೆ ಬರಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಸ್ಪಷ್ಟಪಡಿಸಿದರು. ಇದನ್ನೂ ಓದಿ:ಪೆಟ್ರೋಲ್, ಡೀಸೆಲ್ ಬೆಲೆ- ಫೆಬ್ರವರಿಯಲ್ಲಿ 6 ಬಾರಿ ಏರಿಕೆ