ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್‍ರವರು ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಒಂದು ಕಡೆ ಕೊರೊನಾ ಎರಡನೇಯ ಅಲೆ ಅಬ್ಬರ, ಮತ್ತೊಂದೆಡೆ ಲಾಕ್ ಡೌನ್‍ನಿಂದ ಕೆಲಸ ಕಾರ್ಯವಿಲ್ಲದೆ ಜನ ಹೊಟ್ಟೆ ತುಂಬಿಸಿಕೊಳ್ಳುವುದು ಹೇಗಪ್ಪ ಎಂದು ಯೋಚಿಸುತ್ತಿದ್ದಾರೆ. ಇತಂಹ ಸಮಯದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಗಗನಕ್ಕೇರಿದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ಬಾರಿಸಲು ಮುಂದಾಗಿದೆ. ಕಳೆದ ಮೂರ್ನಾಲ್ಕು ತಿಂಗಳಿಂದ ಪ್ರತಿನಿತ್ಯ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಆಗುತ್ತಿದೆ. ಇದನ್ನು ಓದಿ: ಜಿಲ್ಲಾ ಪ್ರವಾಸಕ್ಕೂ ಮುನ್ನವೇ ಸಿಎಂ ಅನ್‍ಲಾಕ್ ಘೋಷಣೆ?
ಬೆಲೆ ಏರುತ್ತಿದ್ದರೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಬೆಲೆ ಏರಿಕೆಯ ಬಗ್ಗೆ ಜನರಿಗೆ ಆಗುತ್ತಿರುವ ಕಷ್ಟದ ಅರಿವೇ ಇಲ್ಲದಂತೆ ವರ್ತಿಸುತ್ತಿದೆ. ಇದನ್ನ ಖಂಡಿಸಿ ಇಂದು ಲಾಕ್ ಡೌನ್ ಇದ್ದರು ವಾಟಾಳ್ ನಾಗರಾಜ್ ಪ್ರತಿಭಟನೆ ಮಾಡಿದ್ದಾರೆ.

ದೇಶದಲ್ಲಿ ಪೆಟ್ರೋಲ್ ಡಿಸೇಲ್ ಅನಿಲ ಬೆಲೆ ಏರಿಕೆಯ ವಿರುದ್ದ ವಾಟಾಳ್ ನಾಗರಾಜ್‍ರವರು ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡುರಸ್ತೆ ಮಧ್ಯೆ ಕುಳಿತು ಬೆಲೆ ಏರಿಕೆ ಖಂಡಿಸಿದ್ದಾರೆ. ಬೆಲೆ ಏರಿಕೆಯ ಬಿಸಿ ಸಾರ್ವಜನಿಕರ ಮೇಲೆ ಹೊರಯಾಗಲಿದೆ. ಇತಂಹ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದರು ರಾಜ್ಯ ಮತ್ತು ಕೇಂದ್ರ ಸರ್ಕಾರ ಜನರ ಹಿತ ಕಾಪಾಡುವ ಯಾವ ಲಕ್ಷಣಗಳು ಕಾಣ್ತಿಲ್ಲ ಅಂತಾ ಏಕಾಂಗಿಯಾಗಿ ವಾಟಾಳ್ ನಾಗರಾಜ್ ರಸ್ತೆಯ ಮಧ್ಯೆ ಕುಳಿತು ಪ್ರತಿಭಟನೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ:ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಶರಣು ಸಲಗಾರ್, ಬಸವನಗೌಡ ತುರುವಿಹಾಳ್

