ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ತೀವ್ರ ಚರ್ಚೆ ನಡೆಯುತ್ತಿರುವಾಗಲೇ ಪೆಟ್ರೋಲಿಯಂ ಮತ್ತು ನೈಸರ್ಗಿಕ ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ತೈಲ ಬೆಲೆ ಏರಿಕೆಗೆ ಕಾಂಗ್ರೆಸ್ ಕಾರಣ ಎಂದು ದೂರಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ಏರಿಕೆಗೆ ಕಾಂಗ್ರೆಸ್ ಹಾಗೂ ಆರ್ಥಿಕ ಪರಿಸ್ಥಿತಿ ಕಾರಣ. ಯುಪಿಎ ಸರ್ಕಾರ ಇದ್ದಾಗ ತೈಲ ಬಾಂಡ್‍ಗಳ ಮೇಲೆ ಕೋಟ್ಯಂತರ ರೂ. ಸಾಲ ಮಾಡಿತ್ತು. ಈ ಹೊರೆ ನಮ್ಮ ಸರ್ಕಾರದ ಮೇಲೆ ಬಿದ್ದಿದೆ. ಬಿಜೆಪಿ ಸರ್ಕಾರ ಈ ಸಾಲವನ್ನು ಬಡ್ಡಿ ಸಮೇತ ತೀರಿಸುತ್ತಿದೆ. ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾಗುತ್ತಿರುವುದಕ್ಕೆ ಇದು ಪ್ರಮುಖ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
Advertisement
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಹ ತೈಲ ದರ ಹೆಚ್ಚಳವಾಗಿದೆ. ನಾವು ಶೇ.80ರಷ್ಟು ತೈಲವನ್ನು ಆಮದು ಮಾಡಿಕೊಳ್ಳುತ್ತೇವೆ. ಇದು ಭಾರತದಲ್ಲಿ ಇಂಧನ ಬೆಲೆ ಏರಿಕೆಯಾಗಲು ಪ್ರಮುಖ ಕಾರಣ ಎಂದು ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
Advertisement
ಈ ಹಿಂದೆ ಸಹ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಕುರಿತು ಮಾತನಾಡಿದ್ದ ಅವರು, ಇಂಧನ ಬೆಲೆಯನ್ನು ಕಡಿತಗೊಳಿಸಲು ಸಾಧ್ಯವಿಲ್ಲ. ಏಕೆಂದರೆ ಸರ್ಕಾರ ಇತರೆ ಕಲ್ಯಾಣ ಯೋಜನೆಗಳಿಗೆ ಹಣವನ್ನು ಉಳಿತಾಯ ಮಾಡುತ್ತಿದೆ ಎಂದು ಅವರು ಹೇಳಿದ್ದರು.
Advertisement
ದೇಶದ ಬಹುತೇಕ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ.ಗಡಿ ದಾಟಿದ್ದು, ಈ ಕುರಿತು ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಇತ್ತಿಚೆಗೆ ಕಾಂಗ್ರೆಸ್ ಸಹ ಪೆಟ್ರೋಲ್ ಬಂಕ್‍ಗಳ ಮುಂದೆ ಪ್ರತಿಭಟನೆ ನಡೆಸಿದೆ. ಹೀಗಾಗಿ ಈ ಕುರಿತು ಧರ್ಮೇಂದ್ರ ಪ್ರಧಾನ್ ಸ್ಪಷ್ಟನೆ ನೀಡಿದ್ದಾರೆ.