– ಇಂಡಿ ಪಂಪ್ ಪೆಟ್ರೋಲ್ ಬಂಕ್ ನಲ್ಲಿ ಅವಘಡ
ಹುಬ್ಬಳ್ಳಿ: ಪೆಟ್ರೋಲ್ ಹಾಕುವ ವೇಳೆ ಮಾರುತಿ ಓಮ್ನಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಘಟನೆ ನಗರದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರಿನ ಇಂಡಿಪಂಪ್ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ದೊಡ್ಡ ಹಾನಿ ಸಂಭವಿಸಿಲ್ಲ.
ಮಾರುತಿ ಓಮ್ನಿಗೆ ಪೆಟ್ರೋಲ್ ಹಾಕುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವೆಯ ವಾಹನ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಬೆಂಕಿ ಕಾಣುತ್ತಿದಂತೆಯೇ ಜನರು ಆತಂಕಗೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಅಗ್ನಿಶಾಮಕ ಸಿಬ್ಬಂದಿ ಬೆಂಕಿನ ನಂದಿಸಿದ ನಂತರ ಸ್ಥಳೀಯರು ನಿರಾಳರಾದರು.