ಕಲಬುರಗಿ: ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಮುಬ್ನಿನ್(30) ಎಂಬ ಆರೋಪಿಯ ಕಾಲಿಗೆ ಪೊಲೀಸರು ಇಂದು ಗುಂಡೇಟು ನೀಡಿದ ಘಟನೆ ಕಲಬುರಗಿ ಹೊರವಲಯದ ಸುಲ್ತಾನಪುರ ಬಳಿ ನಡೆದಿದೆ.
ಡಕಾಯಿತಿ ಪ್ರಕರಣದಲ್ಲಿ ಮಾರಕಾಸ್ತ್ರ ವಶಕ್ಕೆ ಪಡೆಯಲು ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಯುತ್ನಿಸಿದ್ದನು. ಹೀಗಾಗಿ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಮೇಲೆ ಫೈರಿಂಗ್ ಮಾಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಆರೋಪಿ ಮುಬ್ಬಿನ್ ನನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಘಟನೆಯಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ಕೂಡ ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಲಬುರಗಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.