ಬೆಂಗಳೂರು: ಕೊರೊನಾ ಮಹಾಮಾರಿಯ ವಿರುದ್ಧದ ಹೋರಾಟದಲ್ಲಿ ಮಾಸ್ಕ್ ಅವಶ್ಯಕತೆ ಬಹಳ ಇದೆ. ಆದ್ದರಿಂದ ವೈಲ್ಡ್ ಕ್ರಾಫ್ಟ್ ಸಂಸ್ಥೆಯಿಂದ ಸಾವಿರಾರು ಕೊರೊನಾ ವಾರಿಯರ್ಸ್‍ಗೆ ಎನ್-95 ಮಾಸ್ಕ್ ಗಳನ್ನು ವಿತರಣೆ ಮಾಡಲಾಗುತ್ತಿದೆ. ಸಂಸ್ಥೆಯಿಂದ ಕೊರೊನಾ ವಾರಿಯರ್ಸ್ ಗಳಾದ ಪೊಲೀಸರು ಮತ್ತು ಮಾಧ್ಯಮದವರಿಗೆ ಉನ್ನತ ಗುಣಮಟ್ಟದ ಮಾಸ್ಕ್ ವಿತರಣೆ ಮಾಡಲಾಗುತ್ತಿದೆ.
ಪ್ರತಿದಿನ ಕಂಟೈನ್ಮೆಂಟ್ ಝೋನ್, ರಸ್ತೆಯಲ್ಲಿ ನಿಂತು ಜನರಿಗಾಗಿ ಶ್ರಮಿಸುವ ಪೊಲೀಸರಿಗೆ ಉಚಿತ ಮಾಸ್ಕ್ ವಿತರಣೆ ಮಾಡಲಾಗುತ್ತಿದೆ. ಈ ಮೂಲಕ ಸಮಾಜಕ್ಕಾಗಿ ಹಗಲಿರುಳು ದುಡಿಯುತ್ತಿರುವ ಪೊಲೀಸರಿಗೆ ಸಹಾಯ ಮಾಡುವ ಕೆಲಸ ಮಾಡಲಾಗುತ್ತಿದೆ. ಪೊಲೀಸ್ ಸಹಯೋಗದೊಂದಿಗೆ ಕೇವಲ ಪೊಲೀಸರಿಗೆ ಮಾತ್ರವಲ್ಲದೆ, ಪಬ್ಲಿಕ್ ಟಿವಿ ಸೇರಿದಂತೆ ಹಲವು ಖಾಸಗಿ ಚಾನೆಲ್ ಹಾಗೂ ಮಾಧ್ಯಮ ಸಿಬ್ಬಂದಿಗೆ ಮಾಸ್ಕ್ ಗಳನ್ನು ವಿತರಣೆ ಮಾಡಿದೆ.
Advertisement
Advertisement
ಪೊಲೀಸರು ಕೂಡ ಲಕ್ಷಾಂತರ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸುವ ಮೂಲಕ ಸಾಮಾಜಿಕ ಕಳಕಳಿಯನ್ನು ಮೆರೆದಿದ್ದಾರೆ. ಪೊಲೀಸ್ ಅಧಿಕಾರಿಗಳಾದ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಹಿರಿಯ ಅಧಿಕಾರಿಗಳಾದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಸೇರಿದಂತೆ ಹಲವಾರು ಅಧಿಕಾರಿಗಳ ಸಹಯೋಗದಲ್ಲಿ ಎಲ್ಲ ಪೊಲೀಸ್ ಸಿಬ್ಬಂದಿಗೆ ಮಾಸ್ಕ್ ತಲುಪಿಸುವ ಕೆಲಸ ಮಾಡಲಾಗಿದೆ.