ಬೆಂಗಳೂರು: ಪೊಲೀಸರ ಸೋಗಿನಲ್ಲಿ ಚಿನ್ನಾಭರಣ ಅಂಗಡಿಗೆ ನುಗ್ಗಿದ ಕಳ್ಳರು, ರೇಡ್ ಮಾಡುವ ನೆಪದಲ್ಲಿ 800 ಗ್ರಾಂ. ಚಿನ್ನವನ್ನು ಹೊತ್ತೊಯ್ದಿದ್ದು, ಇದೀಗ ನಾಲ್ವರು ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಸಿಲಿಕಾನ್ ಸಿಟಿಯ ಹಲಸೂರು ಗೇಟ್ ನಗರ್ತಪೇಟೆಯಲ್ಲಿ ಘಟನೆ ನಡೆದಿದ್ದು, ಚಿನ್ನಾಭರಣ ಪಾಲಿಶ್ ಮಾಡುವ ಗೀತಾ ಜ್ಯುವೆಲರ್ಸ್‍ಗೆ ಆರು ಜನ ಪೊಲೀಸ್ ವೇಷಧಾರಿಗಳು ನುಗ್ಗಿ ಸುಮಾರು 800 ಗ್ರಾಂ. ಚಿನ್ನಾಭರಣ, ದಾಖಲೆಗಳನ್ನು ಕಳ್ಳತನ ಮಾಡಿದ್ದರು. ಪ್ರಕರಣಿಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ನಾಗಮಂಗಲ ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
Advertisement
Advertisement
ದೀಪಾವಳಿ ಹಬ್ಬದ ಸಂದರ್ಭದಲ್ಲಿ ನಕಲಿ ಚಿನ್ನ ಮಾರಾಟ ಮಾಡುತ್ತಿರುವುದಾಗಿ ಹೇಳಿ ನಕಲಿ ಪೊಲೀಸರು ದಾಳಿ ಮಾಡಿದ್ದಾರೆ. ನಾವು ಪೊಲೀಸರು ರೇಡ್ ಗೆ ಬಂದಿದ್ದೆವೆ ಎಂದು ಹೇಳಿ ಕಳ್ಳತನ ಮಾಡಿದ್ದಾರೆ. ಅಂಗಡಿ ಕೆಲಸಗಾರನನ್ನು ಜೀಪ್ ನಲ್ಲಿ ಕೂರಿಸಿ ಕಳ್ಳರು ದಾಖಲೆ ಕೊಂಡೊಯ್ದಿದ್ದಾರೆ. ಅಲ್ಲದೆ ಕೋಲ್ಕತ್ತಾದಲ್ಲಿದ್ದ ಗೀತಾ ಜ್ಯುವೆಲರ್ಸ್ ಮಾಲೀಕನಿಗೆ ಕರೆ ಮಾಡಿ, ನಿಮ್ಮ ಅಂಗಡಿ ಮೇಲೆ ರೇಡ್ ಮಾಡಿದ್ದೇವೆ ಪೊಲೀಸ್ ಠಾಣೆಗೆ ಬನ್ನಿ ಎಂದು ಕರೆದಿದ್ದಾರೆ.
Advertisement
Advertisement
ಕಳ್ಳರ ಮಾತು ನಂಬಿ ಗೀತಾ ಜ್ಯುವೆಲರ್ಸ್ ಮಾಲೀಕ ಕಾರ್ತಿಕ್ ಕೋಲ್ಕತ್ತಾ ದಿಂದ ಬಂದಿದ್ದು, ಬಳಿಕ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ವಿಚಾರಿಸಿದ್ದಾರೆ. ಈ ವೇಳೆ ಜ್ಯುವೆಲರ್ಸ್ ನಲ್ಲಿ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ಕಾರ್ತಿಕ್ ಅವರು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ್ವಯ ಪ್ರಕರಣ ದಾಖಲಿಸಿಕೊಂಡು ಅರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.
ಜೀಪ್ ನಂಬರ್ ಆಧಾರದ ಮೇಲೆ ಬಂಧನ
ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಜ್ಯುವಲರಿ ಶಾಪ್ ನೌಕರರನ್ನು ವಿಚಾರಣೆ ನಡೆಸಿದ್ದು, ಈ ವೇಳೆ ನೌಕರ ಜೀಪ್ ನಂಬರ್ ನೆನಪಿಟ್ಟುಕೊಂಡಿದ್ದನ್ನು ಹೇಳಿದ್ದಾರೆ. ಜೀಪ್ ನಂಬರ್ ಆಧಾರದ ಮೇಲೆ ನಾಲ್ವರು ಆರೋಪಿಗಳನ್ನು ಇದೀಗ ಪೊಲಿಸರು ಬಂಧಿಸಿದ್ದಾರೆ. ನಾಗಮಂಗಲ ಮೂಲದ ನಾಲ್ವರನ್ನ ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದು, ಉಳಿದ ಇಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.