ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ವೃತ್ತನೀರಿಕ್ಷಕ ಎಂ.ಬಿ.ನವೀನ್ ಕುಮಾರ್ ಪೊಲೀಸ್ ಜೀಪಿನಲ್ಲಿ ಪತ್ತೆಯಾಗಿರುವ ಹಾವನ್ನು ರಕ್ಷಣೆ ಮಾಡಿ ಕಾಡಿಗೆ ಬಿಡಲಾಗಿದೆ.
Advertisement
ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಕುಮಾರ್ ಕರ್ತವ್ಯ ನಿಮಿತ್ತ ಹೊರ ಹೋಗಿ ಠಾಣೆಗೆ ವಾಪಾಸ್ಸಾಗುತ್ತಿದ್ದಾಗ ಬಸವಭವನದ ಬಳಿ ಬೈಕ್ ಸವಾರರೊಬ್ಬರು ಪೊಲೀಸ್ ಜೀಪಿನಲ್ಲಿ ಹಾವು ಇರೋದನ್ನ ಕಂಡಿದ್ದಾರೆ. ಕೂಡಲೇ ಪೊಲೀಸ್ ಜೀಪ್ ತಡೆದು ಸರ್ಕಲ್ ಇನ್ಸ್‍ಪೆಕ್ಟರ್‍ಗೆ ಮಾಹಿತಿ ನೀಡಿ ವಾಹನ ನಿಲ್ಲಿಸಿದ್ದಾರೆ.
Advertisement
Advertisement
ವಿಷಯ ತಿಳಿದು ಸ್ಥಳಕ್ಕೆ ಬಂದ ಉರಗರಕ್ಷಕ ಟೂಲ್ಸ್ ಬಾಕ್ಸ್ ಸೇರಿದ್ದ ಹಾವನ್ನ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ಸೆರೆ ಸಿಕ್ಕ ಹಾವಿನ ಹೆಸರು ರಾಮಬಾಣದ ಹಾವು ಅಂತ ಕರೆಯಲಾಗುತ್ತದೆ ಎಂದು ಹೇಳಲಾಗುತ್ತಿದೆ. ಹಾವು ಎಲ್ಲಿ ಯಾವಾಗ ಪೊಲೀಸ್ ಜೀಪ್ ಏರಿತೋ ಏನೋ ಆದರೆ ಅದೃಷ್ಟವಶಾತ್ ಹಾವಿನಿಂದ ಪೊಲೀಸರಿಗೆ ಯಾವುದೇ ತೊಂದರೆಯಾಗಿಲ್ಲ.
Advertisement