ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸಲ್ಲ: ಸಿಎಂ ಬಿಎಸ್‍ವೈ

Public TV
2 Min Read
CM BSY DJ KG HALLI

ಬೆಂಗಳೂರು: ಡಿ.ಜಿ.ಹಳ್ಳಿಯ ಗಲಾಟೆಗೆ ಸಂಬಂಧಿಸಿದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಕರಣ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗೂ ಪೊಲೀಸ್ ಠಾಣೆ ಮೇಲೆ ದಾಳಿ, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ. ಇದನ್ನೂ ಓದಿ:   ಕಾವಲ್‌ ಭೈರಸಂದ್ರ ಉದ್ವಿಗ್ನ – ಪಕ್ಕಾ ಪ್ಲಾನ್ ಮಾಡಿ ವಿಕೃತಿ ಮೆರೆದ ಪುಂಡರು

ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬಹುತೇಕ ಪೊಲೀಸ್ ಅಧಿಕಾರಿಗಳ ಗಾಡಿಗಳು ಪುಡಿ ಪುಡಿ

DJ HALLI 7

ಗಲಭೆ ಪ್ರಕರಣದಿಂದ ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಕಾವಲ್ ಭೈರಸಂದ್ರದಲ್ಲಿರುವ ಮೂರು ಅಂತಸ್ತಿನ ಮನೆ ಬೆಂಕಿಗಾಹುತಿಯಾಗಿದೆ. ಶಾಸಕರ ಮನೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪಾಳು ಮನೆಯಂತೆ ಭಾಸವಾಗುತ್ತಿದೆ. ಪರಿಣಾಮ ಅಕ್ಕಪಕ್ಕದ ರಸ್ತೆ, ಮನೆಗಳಲ್ಲಿ ನೀರವ ಮೌನ ಆವರಿಸಿದೆ. ಸದ್ಯಕ್ಕೆ ಪೊಲೀಸರು ಕೆಜಿ ಹಳ್ಳಿಗೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನ ಬಂದ್ ಮಾಡಿದ್ದಾರೆ. ಇದನ್ನೂ ಓದಿ: ಕೆಜಿ ಹಳ್ಳಿ ಗಲಭೆ ಪ್ರಕರಣ – ಎಸ್‍ಡಿಪಿಐ ಮುಖಂಡ ಅರೆಸ್ಟ್

kaval byrasandra Attack Akhanda Srinivas Murthy 2

ಕಿಡಿಗೇಡಿಗಳು ಸ್ಥಳಕ್ಕೆ ಬಂದ ಪೊಲೀಸರು ಮೇಲೂ ದಾಳಿ ಮಾಡಿದ್ದು, ಸಿಕ್ಕ ಸಿಕ್ಕ ವಸ್ತುಗಳಿಗೆಲ್ಲಾ ಬೆಂಕಿ ಹಚ್ಚಿದ್ದರು. ಕೊನೆಗೆ ರಾತ್ರಿಯೆಲ್ಲಾ ಫೀಲ್ಡ್‍ಗೆ ಇಳಿದಿದ್ದ ಪೊಲೀಸರು 110 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ 100ಕ್ಕೂ ಹೆಚ್ಚು ಪೊಲೀಸರಿಗೆ ಗಾಯವಾಗಿದ್ದು, ಗಾಯಗೊಂಡ ಪೊಲೀಸರಿಗೆ ನಗರದ ಹಲವು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತಲೆ, ಬೆನ್ನು, ಮುಖಕ್ಕೆ ಸೇರಿದಂತೆ ಹಲವು ಕಡೆ ಗಂಭೀರ ಗಾಯಗಳಾಗಿವೆ.

Share This Article
Leave a Comment

Leave a Reply

Your email address will not be published. Required fields are marked *