ಬೆಂಗಳೂರು: ನಟ ಪ್ರಜ್ವಲ್ ದೇವರಾಜ್ ಮತ್ತು ರಾಗಿಣಿ ಪ್ರಜ್ವಲ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ವಿಷಯವನ್ನ ಪ್ರಜ್ವಲ್ ದೇವರಾಜ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಇಬ್ಬರಿಗೂ ಕೋವಿಡ್ ಸೋಂಕು ತಗುಲಿದ್ದು, ವೈದ್ಯರು ಸೂಚಿಸಿರುವ ಔಷಧಿಯನ್ನ ತೆಗೆದುಕೊಳ್ಳುತ್ತಿದ್ದೇವೆ. ಹಾಗೆ ಕೊರೊನಾಗೆ ಸಂಬಂಧಿಸಿದ ಪರೀಕ್ಷೆಗೂ ಒಳಗಾಗಿದ್ದೇವೆ. ಇಬ್ಬರು ಜೊತೆಯಾಗಿದ್ದು, ಯಾರೂ ಅತಂಕಕ್ಕೊಳಗಾಗೋದು ಬೇಡ. ನಿಮ್ಮ ಪ್ರೀತಿ ಮತ್ತು ಕಾಳಜಿ ಧನ್ಯವಾದಗಳು ಎಂದು ಪ್ರಜ್ವಲ್ ಬರೆದುಕೊಂಡಿದ್ದಾರೆ.
ಫೆಬ್ರವರಿ 5ರಂದು ಪ್ರಜ್ವಲ್ ದೇವರಾಜ್ ಅಭಿನಯದ ಇನ್‍ಸ್ಪೆಕ್ಟರ್ ವಿಕ್ರಂ ಸಿನಿಮಾ ರಿಲೀಸ್ ಆಗಿತ್ತು. ಕೊರೊನಾ ಆತಂಕದ ನಡುವೆಯೂ ಚಿತ್ರತಂಡ ಸಿನಿಮಾವನ್ನ ರಿಲೀಸ್ ಒಪ್ಪಿಕೊಂಡಿತ್ತು. ಇನ್‍ಸ್ಪೆಕ್ಟರ್ ವಿಕ್ರಂ ಅಭಿಮಾನಿಗಳಿಂದ ಮೆಚ್ಚುಗೆ ಸಹ ಪಡೆದುಕೊಂಡಿತ್ತು.
ರಾಜ್ಯದಲ್ಲಿ ಬುಧವಾರ ಕೊರೊನಾ ಮರಣ ಕೇಕೆ ಹಾಕಿದ್ದು, ಒಂದೇ ದಿನ 26 ಜನರನ್ನ ಬಲಿ ಪಡೆದುಕೊಂಡಿದೆ. ಬುಧವಾರ 4,225 ಪ್ರಕರಣಗಳು ವರದಿಯಾಗಿದ್ದು, 1,492 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
View this post on Instagram
ಕೊರೊನಾ ಸೋಂಕಿತರ ಸಂಖ್ಯೆ 9,97,004ಕ್ಕೆ ಏರಿಕೆಯಾಗಿದ್ದು, 28,248 ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿವೆ. ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 12,567ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದ ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ 266 ಸೋಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.