ಪ್ರತಿಭಾವಂತ ನಟ ಸಂಚಾರಿ ವಿಜಯ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

Public TV
1 Min Read
SANCHARI DKSHI

ಬೆಂಗಳೂರು: ಬೈಕ್ ಅಪಘಾತಕ್ಕೆ ತುತ್ತಾದ ಉದಯೋನ್ಮುಖ ಹಾಗೂ ಪ್ರತಿಭಾವಂತ ನಟ ಸಂಚಾರಿ ವಿಜಯ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

sanchari vijay 1 1 medium

‘ಸಂಚಾರಿ ವಿಜಯ್ ಅವರದು, ಇನ್ನೂ ಚಿಕ್ಕ ವಯಸ್ಸು. ಈಗಷ್ಟೇ ಚಿತ್ರರಂಗದಲ್ಲಿ ನೆಲೆ ನಿಲ್ಲುತ್ತಿದ್ದರು. ಯಾವುದೇ ಹಿನ್ನೆಲೆ ಬೆಂಬಲ ಇಲ್ಲದೆ, ತನ್ನ ಕಲೆ, ಪ್ರತಿಭೆ ಮೂಲಕ ಬೆಳೆಯುತ್ತಿದ್ದ ವಿಜಯ್ ಅವರ ಸಾವಿನ ಸುದ್ದಿ ಕೇಳಿ ನೋವಾಗಿದೆ ಎಂದು ಶಿವಕುಮಾರ್ ಅವರು ಹೇಳಿದ್ದಾರೆ. ಇದನ್ನೂ ಓದಿ: ವಿಜಯ ಕುಮಾರ್ ಮುಂದೆ ‘ಸಂಚಾರಿ’ ಬಂದಿದ್ದು ಹೇಗೆ?

SANCHARI VIJAY PHOTO medium

ಮಾಡಿದ್ದು ಕೆಲವೇ ಚಿತ್ರಗಳಾದರೂ ತಮ್ಮ ಅಮೋಘ ನಟನೆ ಮೂಲಕ ಪ್ರೇಕ್ಷಕರ ಮನಗೆದ್ದಿದ್ದರು. ತಮ್ಮ ಅಭಿನಯಕ್ಕೆ ರಾಷ್ಟ್ರ ಪ್ರಶಸ್ತಿಯನ್ನೂ ಗಳಿಸಿದ್ದರು. ಕೋವಿಡ್ ಸಂಕಷ್ಟದಲ್ಲಿ ತಮ್ಮ ಸ್ನೇಹಿತರ ಜತೆಗೂಡಿ ಬಡವರಿಗೆ ಆಹಾರ ಕಿಟ್ ನೀಡುವುದು, ಆಕ್ಸಿಜನ್ ಸರಬರಾಜು ಮಾಡುವುದು ಸೇರಿದಂತೆ ಅನೇಕ ಜನಪರ ಕೆಲಸಗಳನ್ನು ಮಾಡಿ ಗಮನ ಸೆಳೆದಿದ್ದರು ಎಂದು ಅವರು ಸ್ಮರಿಸಿದ್ದಾರೆ. ಇದನ್ನೂ ಓದಿ: ನಟ ಸಂಚಾರಿ ವಿಜಯ್ ನಿಧನಕ್ಕೆ ಸಿಎಂ ಸಂತಾಪ 

sanchari vijay5 medium

ಅವರ ಬದುಕು ಈ ರೀತಿ ಅಕಾಲಿಕ ಅಂತ್ಯ ಕಂಡಿರುವುದು ದುರಂತ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ. ಅವರ ಅಂಗಾಂಗಗಳ ದಾನಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದು, ವಿಜಯ್ ಅವರ ಸಾವಿನಲ್ಲೂ ಸಾರ್ಥಕತೆ ಮೆರೆದು, ಸಮಾಜಕ್ಕೆ ಸ್ಫೂರ್ತಿಯಾಗಿದ್ದಾರೆ. ಇದನ್ನೂ ಓದಿ: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಇನ್ನಿಲ್ಲ

DK Shivakumar 2

ವಿಜಯ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ’ ಎಂದು ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ನಿನ್ನೆ ನಾನು ಸುಳ್ಳು ಹೇಳಿದ್ದೆ – ವಿಜಯ್ ನೆನೆದು ಕಣ್ಣೀರಿಟ್ಟ ನಿನಾಸಂ ಸತೀಶ್

ಸಂಚಾರಿ ವಿಜಯ್ ನಿಧನಕ್ಕೆ ಇಡೀ ಚಿತ್ರರಂಗ ಕಣ್ಣೀರು ಹಾಕುತ್ತಿದ್ದ, ಸೆಲೆಬ್ರಿಟಿಗಳು ಮಾತ್ರವಲ್ಲದೆ ರಾಜಕೀಯ ನಾಯಕರು ಕೂಡ ಕಂಬನಿ ಮಿಡಿಯುತ್ತಿದ್ದಾರೆ. ಇದನ್ನೂ ಓದಿ: ಅಂಗಾಂಗ ದಾನ ಮಾಡಲು ಮುಂದಾದ ಸಂಚಾರಿ ವಿಜಯ್ ಕುಟುಂಬಸ್ಥರು

Share This Article
Leave a Comment

Leave a Reply

Your email address will not be published. Required fields are marked *