ನವದೆಹಲಿ: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ನಾಲ್ವರು ಸಂಸದರ ಪೈಕಿ ಇಂದು ಮೂವರು ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಸಭೆಯಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ, ಅಶೋಕ್ ಗಸ್ತಿ, ಈರಣ್ಣ ಕಡಾಡಿ ಸೇರಿದಂತೆ ಇಪ್ಪತ್ತು ರಾಜ್ಯಗಳಿಂದ ಆಯ್ಕೆಯಾಗಿದ್ದ 61 ಸದಸ್ಯರ ಪೈಕಿ 41 ಸಂಸದರು ಪ್ರಮಾಣವಚನ ಸ್ವೀಕರಿಸಿದರು.
Advertisement
Advertisement
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸೇರಿದಂತೆ ಉಳಿದ ಸದಸ್ಯರು ಕೊರೊನಾ ಹಾಗೂ ಇನ್ನಿತರ ಕಾರಣಗಳಿಂದ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಪ್ರಮಾಣ ವಚನದ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಅಧಿವೇಶನದಲ್ಲಿ ಆರ್ಥಿಕತೆ, ಕೊರೊನಾ ಮತ್ತು ಗಡಿ ಬಗ್ಗೆ ಚರ್ಚೆ ಮಾಡಲಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಈರಣ್ಣ ಕಡಾಡಿಗೆ ರಾಜ್ಯಸಭಾ ಟಿಕೆಟ್ – ಬಿಜೆಪಿ ತಂತ್ರಗಾರಿಕೆ ಏನು?
Advertisement
ಅಶೋಕ್ ಗಸ್ತಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದವನಾಗಿದ್ದು ಆ ಭಾಗದ ಬಗ್ಗೆ ಹೆಚ್ಚು ಗಮನ ಹರಿಸುತ್ತೇನೆ ಎಂದರು. ಈರಣ್ಣ ಕಡಾಡಿಯವರು, ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಸೇತುವೆಯಂತೆ ಕೆಲಸ ಮಾಡ್ತೀನಿ ಎಂದು ತಿಳಿಸಿದರು.