ಲಕ್ನೋ: ಕೊರೊನಾ ಲಾಕ್‍ಡೌನ್ ಬಳಿಕ ಮೊದಲ ಬಾರಿಗೆ ವಿಶ್ವ ವಿಖ್ಯಾತ ತಾಜ್ ಮಹಲ್ ಪ್ರವೇಶಕ್ಕೆ ಷರತ್ತು ವಿಧಿಸಿ ಪ್ರವಾಸಿಗರ ಭೇಟಿಗೆ ಅನುಮತಿ ನೀಡಲಾಗಿದೆ.
Advertisement
ಕೊರೊನಾ ಕಾರಣದಿಂದಾಗಿ ದೇಶದಲ್ಲಿ ಬಹುತೇಕ ಪ್ರವಾಸಿ ತಾಣಗಳು ಮುಚ್ಚಲ್ಪಟ್ಟಿದ್ದವು. ಸೋಂಕು ಪ್ರಸರಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ಪ್ರೇಕ್ಷಣೀಯ ಸ್ಥಳಗಳನ್ನು ತೆರೆಯಲು ನಿರ್ಧರಿಸಲಾಗಿದೆ. ತಾಜ್‍ಮಹಲ್ ಸೇರಿದಂತೆ, ಕೇಂದ್ರ ಸರ್ಕಾರದಿಂದ ಸಂರಕ್ಷಿಸಲ್ಪಡುವ ಎಲ್ಲಾ ಸ್ಮಾರಕಗಳನ್ನು ಇಂದಿನಿಂದ (ಜೂ.16) ಮತ್ತೆ ತೆರೆಯಲಾಗುತ್ತಿದ್ದು, ಪ್ರವಾಸಿಗರು ಕಣ್ತುಂಬಿಕೊಳ್ಳಬಹುದಾಗಿದೆ. ಸುಮಾರು 2 ತಿಂಗಳ ಬಳಿಕ ಪ್ರವಾಸಿಗರಿಗೆ ತಾಜ್‍ಮಹಲ್ ಪ್ರವೇಶಕ್ಕೆ ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತಿದೆ. ಇದನ್ನೂ ಓದಿ: ಕಾನೂನು ರಕ್ಷಣೆ ರದ್ದು – ಟ್ವಿಟ್ಟರ್ ವಿರುದ್ಧ ಬಿತ್ತು ಮೊದಲ ಕೇಸ್
Advertisement
Advertisement
ಕೊರೊನಾ ಎರಡನೇ ಅಲೆ ಕಾಣಿಸಿಕೊಂಡ ಬಳಿಕ ಪ್ರೇಕ್ಷಣೀಯ ಸ್ಥಳಗಳಾದ ಕೆಂಪುಕೋಟೆ, ತಾಜ್‍ಮಹಲ್, ಅಜಂತಾ ಗುಹೆ ಸೇರಿದಂತೆ ಎಲ್ಲಾ ಕೇಂದ್ರೀಕೃತ ಸ್ಮಾರಕಗಳು ಹಾಗೂ ವಸ್ತು ಸಂಗ್ರಹಾಲಯಗಳನ್ನು ಏಪ್ರಿಲ್ 15ರಿಂದ ಮುಚ್ಚಲು ಸರ್ಕಾರ ಆದೇಶಿಸಿತ್ತು. ಇದೀಗ ತಾಜ್ ಮಹಲ್‍ಗೆ ಭೇಟಿ ನೀಡುವ ಪ್ರವಸಿಗರಿಗೆ ಅವಕಾಶ ಕಲ್ಪಸಿಕೊಡಲಾಗಿದೆ.
Advertisement
Shopkeepers near Taj Mahal express hope with the reopening of the monument.
A shopkeeper says, “We will now be able to breath a sigh of relief as tourists have started coming. We will be able to run our household properly now.” pic.twitter.com/pEJlRogOu8
— ANI UP (@ANINewsUP) June 16, 2021
ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾದ ತಾಜ್‍ಮಹಲ್‍ನ್ನು ಕೊರೊನಾ ಕಾರಣದಿಂದಾಗಿ ಎರಡನೇ ಬಾರಿಗೆ ಏಪ್ರಿಲ್ 4ರಿಂದ ಮುಚ್ಚಲಾಗಿತ್ತು. ಕಳೆದ ವರ್ಷ ಕೂಡ ಕೋವಿಡ್ ಹೆಚ್ಚಾಗಿದ್ದರಿಂದ ತಾಜ್‍ಮಹಲ್‍ಗೆ ಪ್ರವಾಸಿಗರ ಪ್ರವೇಶವನ್ನು ನಿಬರ್ಂಧಿಸಲಾಗಿತ್ತು.
Agra: People visit the Taj Mahal as all Centrally protected monuments/sites and museums under Archaeological Survey of India (ASI) open from today.
No more than 650 people will be allowed inside Taj Mahal at a time. Tickets will be sold online. pic.twitter.com/6kgEzjNtdS
— ANI UP (@ANINewsUP) June 16, 2021
ಒಮ್ಮೆಗೆ ಕೇವಲ 650 ಮಂದಿ ಪ್ರವಾಸಿಗರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಆದರೆ ಸ್ಮಾರಕದ ಯಾವುದೇ ಭಾಗವನ್ನು ಮುಟ್ಟಲು ಪ್ರವಾಸಿಗರಿಗೆ ಅವಕಾಶ ನೀಡುವುದಿಲ್ಲ. ಭೇಟಿ ನೀಡುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ತಾಜ್‍ಮಹಲ್‍ಗೆ ಭೇಟಿ ನೀಡುವ ಪ್ರವಾಸಿಗರು ಸ್ಪಂಜಿನಂತಹ ಕಾರ್ಪೆಟ್ ಮೇಲೆ ಮಾತ್ರ ನಡೆಯಬೇಕು. ಅಲ್ಲಿ ಸ್ಯಾನಿಟೈಜರ್ ಸಿಂಪಡಿಸಲಾಗಿದ್ದು, ತಾಜ್‍ಮಹಲ್ ಪ್ರವೇಶಿಸುವ ಪ್ರವಾಸಿಗರ ಶೂ, ಚಪ್ಪಲಿಗಳು ಸ್ಯಾನಿಟೈಸ್ ಆಗಲಿದೆ.
ಕಳೆದ 2 ತಿಂಗಳುಗಳಿಂದ ಅಂಗಡಿ ತೆರೆಯಲಾಗದೇ ಜೀವನ ನಿರ್ವಹಣೆಗೆ ಸಂಕಷ್ಟ ಎದುರಿಸಿದ್ದೆವು. ಈಗ ತಾಜ್ ಮಹಲ್ ಅನ್ನು ಪ್ರವಾಸಿಗರಿಗೆ ತೆರೆಯಲಾಗಿದ್ದು, ನಾವೂ ಕೂಡ ಅಂಗಡಿಗಳನ್ನು ತೆರೆಯುತ್ತಿದ್ದೇವೆ. ಇದರಿಂದ ನಮ್ಮ ಸಂಕಷ್ಟ ಕೊಂಚ ಸಹಾಯವಾಗುತ್ತದೆ ಎಂದು ಭಾವಿಸಿದ್ದೇವೆ ಎಂದು ಅಲ್ಲಿನ ವ್ಯಾಪಾರಿಯೊಬ್ಬರು ಹೇಳಿದ್ದಾರೆ.