ಬೆಂಗಳೂರು: ಪ್ರವಾಹ ಭೀತಿ ಎದುರಿಸುತ್ತಿರುವ ಬಾದಾಮಿ ವಿಧಾನಸಭೆ ಕ್ಷೇತ್ರದ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ, ಈಗಾಗಲೇ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಡಿಸಿಯವರು, ಸದ್ಯಕ್ಕೆ ಪ್ರವಾಹ ಸಾಧ್ಯತೆ ಇಲ್ಲ. ಆದರೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯಗೆ ತಿಳಿಸಿದರು.
Advertisement
ಪ್ರವಾಹ ಭೀತಿ ಎದುರಿಸುತ್ತಿರುವ ಬಾದಾಮಿ ವಿಧಾನಸಭೆ ಕ್ಷೇತ್ರದ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬಾಗಲಕೋಟೆ ಜಿಲ್ಲಾಧಿಕಾರಿಗಳು ಹಾಗೂ ತಹಶಿಲ್ದಾರರಿಗೆ ಸೂಚಿಸಿದ್ದೇನೆ. ಇದೇ ವೇಳೆ ಕೊರೊನಾ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚೆ ನಡೆಸಿದೆ.
— Siddaramaiah (@siddaramaiah) August 9, 2020
Advertisement
ಇದೇ ವೇಳೆ ಬಾದಾಮಿ ತಹಶೀಲ್ದಾರರ ಜೊತೆಗೂ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿದರು. ಮುಳುಗಡೆ ಭೀತಿ ಎದುರಿಸುತ್ತಿರುವ ಗ್ರಾಮಗಳ ಬಗ್ಗೆ ನಿಗಾ ವಹಿಸಬೇಕು ಎಂದರು.
Advertisement
ಕೊರೊನಾ ಕುರಿತಾಗಿಯೂ ತಹಶೀಲ್ದಾರರಿಂದ ಮಾಹಿತಿ ಪಡೆದುಕೊಂಡ ಸಿದ್ದರಾಮಯ್ಯ, ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಲೋಪವಾಗದಂತೆ ನೋಡಿಕೊಳ್ಳಬೇಕು. ಹಾಗೆಯೇ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿದ್ದರಾಮಯ್ಯ ಸೂಚಿಸಿದರು.