ಚಾಮರಾಜನಗರ: ಜಿಲ್ಲೆಯಲ್ಲಿ ಪ್ರವಾಹ ಭೀತಿಯಲ್ಲಿರುವ ನದಿಪಾತ್ರದ ಗ್ರಾಮಗಳ ಸುತ್ತಮುತ್ತ ಡ್ರೋನ್ ಕಣ್ಗಾವಲು ಇಡಲಾಗಿದೆ.
ಕೆಆರ್‍ಎಸ್ ಹಾಗೂ ಕಬಿನಿ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದ ನೀರು ಬಿಡುಗಡೆ ಮಾಡಿರುವುದರಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಕೊಳ್ಳೇಗಾಲ ತಾಲೂಕಿನ ಮುಳ್ಳೂರು, ದಾಸನಪುರ, ಹಳೇಹಂಪಾಪುರ, ಹರಳೆ, ಹಳೇ ಅಣಗಳ್ಳಿ, ಹೊಸ ಅಣಗಳ್ಳಿ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಈಗಾಗಲೇ ಜಮೀನುಗಳಿಗೆ ನೀರು ನುಗ್ಗಿ ಅಲ್ಲಲ್ಲಿ ಬೆಳೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಗ್ರಾಮಗಳ ಸುತ್ತಮುತ್ತ ಡ್ರೋನ್ ಕಣ್ಗಾವಲು ಇಡಲಾಗಿದೆ. ಅಲ್ಲದೆ ಚಾಮರಾಜನಗರ ಜಿಲ್ಲಾ ಪೊಲೀಸ್ ವತಿಯಿಂದ ತುರ್ತು ಸಹಾಯವಾಣಿ ತೆರೆಯಲಾಗಿದೆ.
ತೊಂದರೆ ಎದುರಾದಲ್ಲಿ ಸಾರ್ವಜನಿಕರು ಉಚಿತ ಕರೆ 100ಕ್ಕೆ ಫೋನ್ ಮಾಡಬಹುದು. ದೂರವಾಣಿ 08226-222398, ವಾಟ್ಸಪ್ ನಂಬರ್ 9480804600 ಈ ನಂಬರ್‌ಗಳಿಗೆ ಫೋನ್ ಮಾಡಿ. ಇಲ್ಲವಾದರೆ ಎಸ್‍ಎಂಎಸ್ ಅಥವಾ ವಾಟ್ಸಪ್ ಮಾಡಬಹುದಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಸಾರ ಥಾಮಸ್ ತಿಳಿಸಿದ್ದಾರೆ.