ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಬೇಡಿಕೆ ಹೆಚ್ಚಿರುವ ಬಗ್ಗೆ ನಿನ್ನೆಯಷ್ಟೇ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಇದೀಗ ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಆರಂಭಿಸಲು ಸರ್ಕಾರ ಸಿದ್ಧತೆ ನಡೆಸಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ರಾಜ್ಯದ 276 ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಶಿಕ್ಷಣ ನೀಡಲು ಕ್ಯಾಬಿನೆಟ್ ಸಭೆ ನಿರ್ಧರಿಸಿದೆ. ಮುಂದಿನ ವರ್ಷದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಎಲ್‍ಕೆಜಿ, ಯುಕೆಜಿ ಶಿಕ್ಷಣ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
Advertisement
Advertisement
ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಡಿಜಿಟಲ್ ಲರ್ನಿಂಗ್ ಆರಂಭಿಸಲು ತೀರ್ಮಾನಿಸಿದ್ದೇವೆ. 430 ಪ್ರಥಮ ದರ್ಜೆ ಕಾಲೇಜು, 87 ಪಾಲಿಟೆಕ್ನಿಕ್ ಮತ್ತು 14 ಸರ್ಕಾರಿ ಎಂಜನಿಯರಿಂಗ್ ಕಾಲೇಜುಗಳಿದ್ದು, ಇದಕ್ಕಾಗಿ 35 ಕೋಟಿ ರೂ. ನೀಡಲು ಒಪ್ಪಿಗೆ ನೀಡಲಾಗಿದೆ. ಜೊತೆಗೆ ಬಿಬಿಎಂಪಿಯ 198 ವಾರ್ಡ್‍ಗಳನ್ನು 225ಕ್ಕೆ ಹೆಚ್ಚಿಸುವ ಚರ್ಚೆ ಆಗಿದೆ. ನಾಳೆ ಈ ಬಗ್ಗೆ ನಿರ್ಧಾರವಾಗುತ್ತೆ ಎಂದು ಸಚಿವ ಮಾಧುಸ್ವಾಮಿ ವಿವರಿಸಿದರು. ಇನ್ನೂ ಆಂಬುಲೆನ್ಸ್ ವ್ಯವಸ್ಥೆಗೆ ಇದ್ದ ಕಿಲೋ ಮೀಟರ್ ರೂಲ್ಸ್ ತೆಗೆಯಲು ಸಂಪುಟ ತೀರ್ಮಾನಿಸಿದೆ. ರಾಯಚೂರಿನ ಅರಕೇರಾವನ್ನು ಹೊಸ ತಾಲೂಕಾಗಿ ಘೋಷಿಸಲಾಗಿದೆ.