ಹಾವೇರಿ: ಪ್ರೀತಿಯನ್ನು ಒಪ್ಪಿಕೊಳ್ಳದ ಮನೆಮಂದಿ ಯವತಿಗೆ ಬೇರೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿದ ಬೆನ್ನಲ್ಲೇ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಹಾವೇರಿ ತಾಲೂಕು ನಾಗನೂರು ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಪ್ರೇಮಿಗಳನ್ನು ವಿದ್ಯಾಶ್ರೀ ಗಾಳಿ(22) ಮತ್ತು ಇರ್ಷಾದ್ ಕುಡಚಿ(23) ಎಂದು ಗುರುತಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ಇವರಿಬ್ಬರು ಪರಸ್ಪರ ಪ್ರೀತಿಸಿದ್ದರು. ವಿದ್ಯಾಶ್ರೀ ಬಿ.ಕಾಂ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇರ್ಷಾದ್ ಡಿಪ್ಲೊಮಾ ಮುಗಿಸಿದ್ದ. ನಿನ್ನೆ ಬೆಳಗಿನ ಜಾವ ಮನೆಯಿಂದ ವಿದ್ಯಾಶ್ರೀ ನಾಪತ್ತೆಯಾಗಿದ್ದಳು. ಈ ಕುರಿತು ಹಾವೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ವಿದ್ಯಾಶ್ರೀ ಕಾಣೆಯಾಗಿದ್ದ ಪ್ರಕರಣ ದಾಖಲಾಗಿತ್ತು. ಅಲ್ಲದೇ ಕಳೆದ ಕೆಲವು ದಿನಗಳ ಹಿಂದೆ ಬೇರೊಬ್ಬ ಯುವಕನ ಜೊತೆ ವಿದ್ಯಾಶ್ರೀ ನಿಶ್ಚಿತಾರ್ಥ ಆಗಿತ್ತು.
ಸ್ಥಳಕ್ಕೆ ಹಾವೇರಿ ಗ್ರಾಮೀಣ ಠಾಣೆ ಸಿಪಿಐ ನಾಗಮ್ಮ, ಮಹಿಳಾ ಠಾಣೆ ಸಿಪಿಐ ಚಿದಾನಂದ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.