ಪ್ರೀತಿಸಿ ಮದುವೆಯಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Public TV
1 Min Read
Shivamogga crime

– ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದ ಯುವತಿ
– ವರದಕ್ಷಿಣೆ ಕಿರುಕುಳ ಆರೋಪ

ಶಿವಮೊಗ್ಗ: 2 ವರ್ಷಗಳ ಕಾಲ ಪರಸ್ಪರ ಪ್ರೀತಿಸಿ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದ, ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗಾಡಿಕೊಪ್ಪ ಬಡಾವಣೆಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಗೃಹಿಣಿ ಮೋನಿಕಾ (21) ಆಗಿದ್ದಾಳೆ. ಈಕೆ ಚಂದನ್ ಎಂಬಾತನನ್ನು 2 ವರ್ಷಗಳ ಕಾಲ ಪ್ರೀತಿಸಿ ವಿವಾಹವಾಗಿದ್ದಳು. ಆದರೆ ಮದುವೆಯಾಗಿ ಒಂದೂವರೆ ವರ್ಷದೊಳಗೆ ನೇಣು ಬಿಗಿದು ಕೊಂಡು ಸಾವನ್ನಪ್ಪಿದ್ದಾಳೆ.

teenage couple love marrige

ಪ್ರೀತಿಸಿ ವಿವಾಹವಾಗಿದ್ದ ಮೋನಿಕಾ ಹಾಗೂ ಚಂದನ್ ಗಾಡಿಕೊಪ್ಪ ಬಡಾವಣೆಯಲ್ಲಿ ಮನೆ ಮಾಡಿಕೊಂಡು ವಾಸಿಸುತ್ತಿದ್ದರು. ವಿವಾಹವಾದ ಆರಂಭದ ಮೂರು – ನಾಲ್ಕು ತಿಂಗಳು ಇಬ್ಬರು ಅನ್ಯೋನ್ಯವಾಗಿದ್ದರು. ನಂತರ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದೇ ಪತಿ ಚಂದನ್ ಪತ್ನಿ ಮೋನಿಕಾಳ ಜೊತೆ ಪ್ರತಿನಿತ್ಯ ಜಗಳ ಆಡುತ್ತಿದ್ದನಂತೆ. ಅಲ್ಲದೇ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಮೃತ ಮೋನಿಕಾ ಪೋಷಕರು ಆರೋಪಿಸುತ್ತಿದ್ದಾರೆ.

love hand wedding valentine day together holding hand 38810 3580 medium

ಮೋನಿಕಾ ಆತ್ಮಹತ್ಯೆ ಮಾಡಿಕೊಳ್ಳುವಂತ ಹುಡುಗಿ ಅಲ್ಲ. ಯಾವುದೇ ಸಮಸ್ಯೆ ಬಂದರೂ ಎದುರಿಸುವಂತಹ ಧೈರ್ಯವಂತೆ. ಪತಿ ಚಂದನ್ ಹಾಗೂ ಅವರ ಕುಟುಂಬಸ್ಥರು ಸೇರಿಕೊಂಡು ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಮೃತ ಮೋನಿಕಾ ಪೋಷಕರು ಆರೋಪಿಸಿದ್ದಾರೆ.

wedding

ನಿನ್ನೆ ಮಧ್ಯಾಹ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡಿದ್ದ ಸ್ಥಿತಿಯಲ್ಲಿದ್ದ ಮೋನಿಕಾಳನ್ನು ಪತಿ ಚಂದನ್ ಹಾಗೂ ಆತನ ಪೋಷಕರು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವೈದ್ಯರು ಪರೀಕ್ಷಿಸಿ ಮೋನಿಕಾ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

wedding1

ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಶವವನ್ನು ಪತಿ ಚಂದನ್ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಈ ಘಟನೆ ತುಂಗಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದರೂ, ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಳಿಕ ಪತಿ ಚಂದನ್‍ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ಪೊಲೀಸರ ತನಿಖೆಯ ನಂತರವಷ್ಟೇ ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಸತ್ಯಾಂಶ ಹೊರ ಬರಬೇಕಿದೆ.

Share This Article
Leave a Comment

Leave a Reply

Your email address will not be published. Required fields are marked *