– ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ
ಹೈದಾರಾಬಾದ್: ತನ್ನ ಪ್ರೀತಿಯನ್ನು ನಿರಾಕರಿಸಿದ ಯುವತಿಯನ್ನು ಯುವಕನೊಬ್ಬ ಸಜೀವ ದಹನ ಮಾಡಿರುವ ಆಘಾತಕಾರಿ ಘಟನೆಯೊಂದು ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.
ಮೃತ ದುರ್ದೈವಿ ಯುವತಿ ನರ್ಸ್ ಆಗಿದ್ದು, ವಿಜಯವಾಡದಲ್ಲಿರುವ ಕೊರೊನಾ ವೈರಸ್ ಸೆಂಟರ್ ನಲ್ಲಿ ಕೆಲ ಮಾಡುತ್ತಿದ್ದರು. ಘಟನೆ ಸಂಬಂಧ ಆರೋಪಿಯನ್ನು ಇದುವರೆಗೆ ಬಂಧಿಸಿಲ್ಲ. ಇನ್ನು ಈ ಸಂಬಂಧ ತನಿಖೆ ಮುಂದುವರಿದಿದೆ.
ತಾನು ನಿನ್ನನ್ನು ಪ್ರೀತಿಸುವುದಾಗಿ ಯುವಕ, ಯುವತಿ ಬಳಿ ಹೇಳಿದ್ದಾನೆ. ಆದರೆ ಯುವಕನ ಈ ಮಾತನ್ನು ಯುವತಿ ನಿರಾಕರಿಸಿದ್ದಳು. ಇದರಿಂದ ಸಿಟ್ಟಿಗೆದ್ದ ಯುವಕ, ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ಪೆಟ್ರೋಲ್ ಸುರಿದ್ದರಿಂದ ಬಹುಬೇಗನೇ ಬೆಂಕಿ ಹಚ್ಚಿಕೊಂಡ ಪರಿಣಾಮ ಗಂಭೀರ ಗಾಯಗೊಂಡು ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಕೂಡಲೇ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಸಾಕ್ಷಿಗೆ ಕಲೆ ಹಾಕಿದ್ದಾರೆ.