ಹುಬ್ಬಳ್ಳಿ: ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿಗೆ ಹುಬ್ಬಳ್ಳಿಯ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಐಸಿಎಂಆರ್ ನಿಂದ ಅನುಮತಿ ನೀಡಲಾಗಿದ್ದು, ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಕಿಮ್ಸ್ ವೈದ್ಯರು ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ರಕ್ತವೇ ಸಿಗುತ್ತಿಲ್ಲ.
ಕೋವಿಡ್-19 ಸೋಂಕಿನಿಂದ ಗುಣಮುಖರಾದ ರೋಗಿಗಳು ರಕ್ತ ನೀಡಲು ಒಪ್ಪುತ್ತಿಲ್ಲ. ಮೊದಲು ರಕ್ತ ನೀಡಲು ಒಪ್ಪಿಕೊಂಡಿದ್ದ ಕೊರೊನಾ ಸೋಂಕಿನಿಂದ ಗುಣಮುಖರಾದವರು ಈಗ ರಕ್ತ ನೀಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ.
Advertisement
Advertisement
ಹೊರ ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾದವರ ರಕ್ತಕ್ಕಾಗಿ ಕಿಮ್ಸ್ ವೈದ್ಯರು ಬೇಡಿಕೆ ಸಲ್ಲಿಸಿದ್ದಾರೆ. ಒಂದು ಕಡೆ ಚಿಕಿತ್ಸೆಗೆ ರಕ್ತ ಸಿಗ್ತಿಲ್ಲ. ಮತ್ತೊಂದೆಡೆ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೊಳಪಡುವ ರೋಗಿಯೂ ಸಹ ಆಸ್ಪತ್ರೆಯಲ್ಲಿಲ್ಲ. ಬಾಗಲಕೋಟೆ ಮೂಲದ ಗರ್ಭಿಣಿ ಮಹಿಳೆಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ವೈದ್ಯರು ಸಿದ್ಧತೆ ಮಾಡಿಕೊಂಡಿದ್ದರು, ಆದರೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಅವರಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಅಗತ್ಯವಿಲ್ಲ.
Advertisement
Advertisement
ಸದ್ಯಕ್ಕೆ ಕಿಮ್ಸ್ ನಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೊಳಪಡುವ ಸೋಂಕಿತರು ಯಾರು ಇಲ್ಲ. ಹೀಗಾಗಿ ಕಿಮ್ಸ್ ನಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನಡೆಯುವುದು ಅನುಮಾನ ಎನ್ನಲಾಗುತ್ತಿದೆ.