ಕೋಲ್ಕತ್ತಾ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಬಿಜೆಪಿಗೆ ಸೇರ್ಪಡೆಯಾಗುತ್ತಾರಾ ಎಂಬ ಪ್ರಶ್ನೆಗೆ ಹೌದು ಎಂಬ ಉತ್ತರ ಪಶ್ಚಿಮ ಬಂಗಾಳ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ಇತ್ತೀಚೆಗೆ ಸೌರವ್ ಗಂಗೂಲಿ ಅವರು ತೆಗೆದುಕೊಂಡ ಒಂದು ನಿರ್ಧಾರ ಸದ್ಯ ಭಾರೀ ಚರ್ಚೆಗೆ ಕಾರಣವಾಗಿದೆ. ಸೌರವ್ ಗಂಗೂಲಿ ನೇತೃತ್ವದ ಟ್ರಸ್ಟ್ ಕೋಲ್ಕತ್ತಾದಲ್ಲಿ ಶಾಲೆಯನ್ನು ನಡೆಸುತ್ತಿದೆ. ಈ ಶಾಲೆಗೆ ಈಶಾನ್ಯ ಕೋಲ್ಕತ್ತಾ ಪ್ರದೇಶದಲ್ಲಿ ಪಶ್ಚಿಮ ಬಂಗಾಳ ಸರ್ಕಾರ 2 ಎಕರೆ ಭೂಮಿಯನ್ನು ಮಂಜೂರು ಮಾಡಿತ್ತು. ಆದರೆ ಈ ಸ್ಥಳ ವಿವಾದದಲ್ಲಿ ಸಿಕ್ಕಿಹಾಕಿಕೊಂಡಿರುವ ಕಾರಣ ಗಂಗೂಲಿ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.
Advertisement
Advertisement
ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಇತ್ತೀಚೆಗೆ ಭೇಟಿ ಮಾಡಿದ್ದ ಗಂಗೂಲಿ, ಟ್ರಸ್ಟ್‍ಗೆ ನೀಡಿದ್ದ ಭೂಮಿಯನ್ನು ವಾಪಾಸ್ ನೀಡುವುದಾಗಿ ತಿಳಿಸಿದ್ದರು. ಟ್ರಸ್ಟ್ ಕೂಡ ಭೂಮಿಯನ್ನು ಹಿಂಪಡೆಯುವಂತೆ ಸರ್ಕಾರಕ್ಕೆ ಪತ್ರ ಬರೆದಿತ್ತು. ಈ ಪತ್ರದ ಅನ್ವಯ ಸದ್ಯ ಭೂಮಿಯನ್ನು ಸರ್ಕಾರ ವಾಪಾಸ್ ಪಡೆದಿದೆ ಎಂದು ಪಶ್ಚಿಮ ಬಂಗಾಳ ಗೃಹ ಮಂಡಳಿ ಅಭಿವೃದ್ಧಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
ಮುಂದಿನ ವರ್ಷ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ರಾಜ್ಯದಲ್ಲಿ ಸ್ಪರ್ಧೆ ನಿಲ್ಲುವ ಸಮಾನ ನಾಯಕರ ಹುಡುಕಾಟದಲ್ಲಿ ಬಿಜೆಪಿ ಇದೆ. ಪರಿಣಾಮ ಗಂಗೂಲಿ ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಚರ್ಚೆ ಜೋರಾಗಿದೆ. ಬಿಜೆಪಿ ಗಂಗೂಲಿ ಅವರನ್ನೇ ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಿ ಚುನಾವಣೆಗೆ ಎದುರಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.
Advertisement
ಇತ್ತ ಗಂಗೂಲಿ ಅವರು ಕೂಡ ಬಿಜೆಪಿಯೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, 2019ರಲ್ಲಿ ಗಂಗೂಲಿ ಅವರು ಬಿಸಿಸಿಐ ಅಧ್ಯಕ್ಷರಾಗಲು ಅಂದು ಅಮಿತ್ ಶಾ ಹಾಗೂ ಮತ್ತಿಬ್ಬರು ಬಿಜೆಪಿ ಸಚಿವರು ನೆರವು ನೀಡಿದ್ದರು ಎಂಬ ಸುದ್ದಿ ಕೇಳಿ ಬಂದಿತ್ತು. ಆದರೆ ಈ ಹಿಂದೆಯೇ ರಾಜಕೀಯ ಪ್ರವೇಶದ ಕುರಿತು ಸ್ಪಷ್ಟನೆ ನೀಡಿದ್ದ ಗಂಗೂಲಿ, ತಾನು ಉತ್ತಮ ಕ್ರಿಕೆಟಿಗ ಎಂದು ಹೆಸರು ಪಡೆದಿದ್ದೇನೆ. ರಾಜಕೀಯ ಪ್ರವೇಶ ಮಾಡುವ ಅಲೋಚನೆ ಇಲ್ಲ ಎಂದಿದ್ದರು. ಆದರೆ ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಗಂಗೂಲಿ ಅವರ ಮತ್ತೆ ಪಶ್ಚಿಮ ಬಂಗಾಳ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.