ನವದೆಹಲಿ: ಕೊರೊನಾದಿಂದಾಗಿ ದೇಶದಲ್ಲಿ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‍ಇ) 12ನೇ ತರಗತಿ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್‌ನಲ್ಲಿ ತಿಳಿಸುತ್ತಿದ್ದಂತೆ, 12ನೇ ತರಗತಿ ವಿದ್ಯಾರ್ಥಿಯೊಬ್ಬ ನೇಹಾಳನ್ನು ಸೀರೆಯಲ್ಲಿ ನೋಡಬೇಕು ಫೇರ್‌ವೆಲ್‌ಗೆ ಅವಕಾಶ ಕೊಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾನೆ.
Advertisement
ಮೋದಿ ಅವರು ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆ ರದ್ದು ಗೊಳ್ಳುತ್ತಿದ್ದಂತೆ, ಭಾರತ ಸರ್ಕಾರ ಕೊರೊನಾ ಎರಡನೇ ಅಲೆಯ ಪರಿಣಾಮ ಸಿಬಿಎಸ್‍ಇ 12ನೇ ತರಗತಿ ಪರೀಕ್ಷೆ ರದ್ದು ಮಾಡಿದೆ. ನಮ್ಮ ದೇಶದ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸರ್ಕಾರ ಅತ್ಯಂತ ಮಹತ್ವ ನೀಡುತ್ತದೆ. ವಿದ್ಯಾರ್ಥಿಗಳ ಆರೋಗ್ಯದ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಹಾಗಾಗಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದರು. ಇದನ್ನೂ ಓದಿ:ಮುಂದುವರಿದ ಸಂಘರ್ಷ – ಸಿಎಂ ಮಮತಾ ಬ್ಯಾನರ್ಜಿ 9 ಪ್ರಶ್ನೆಗಳಿಗೆ ಕೇಂದ್ರದ ಉತ್ತರ
Advertisement
Government of India has decided to cancel the Class XII CBSE Board Exams. After extensive consultations, we have taken a decision that is student-friendly, one that safeguards the health as well as future of our youth. https://t.co/vzl6ahY1O2
— Narendra Modi (@narendramodi) June 1, 2021
Advertisement
ಈ ರೀತಿ ಮೋದಿ ಟ್ವೀಟ್ ಮಡುತ್ತಿದ್ದಂತೆ ಕುಕಿ ಅಗರ್ವಾಲ್ ಎಂಬ ಹೆಸರಿನ ವಿದ್ಯಾರ್ಥಿಯೊಬ್ಬ, ಮೋದಿ ಸರ್ ದಯಮಾಡಿ ಫೇರ್ ವೆಲ್ ಕಾರ್ಯಕ್ರಮಕ್ಕೆ ಅವಕಾಶ ಮಾಡಿಕೊಡಿ. ಏಕೆಂದರೆ ನಾನು 12ನೇ ತರಗತಿಯ ನೇಹಾಳನ್ನು ಸೀರೆಯಲ್ಲಿ ನೋಡಬೇಕು ಎಂದು ಕಮೆಂಟ್ ಮಾಡಿದ್ದಾನೆ. ಇದೀಗ ಈ ಕಮೆಂಟ್ ವೈರಲ್ ಆಗತೊಡಗಿದೆ.
Advertisement
Sir farewell to kraa do….wo 12th B wali neha ko साड़ी me dekhna tha.
— Kuki Aggarwal (@kukiaggarwal) June 1, 2021
ಕುಕಿ ಅಗರ್ವಾಲ್‍ನ ಟ್ವೀಟ್ ನೋಡಿ ನೆಟ್ಟಿಗರು ಹಲವು ರೀತಿಯ ಪ್ರಶ್ನೆ ಮತ್ತು ಹಾಸ್ಯ ಮಡುತ್ತಿದ್ದಾರೆ. ಈ ಟ್ವೀಟ್‍ನ್ನು ಹಲವರು ಶೇರ್ ಹಾಗೂ ಲೈಕ್ ಮಾಡುತ್ತಿದ್ದಾರೆ.