ಪ್ಯಾರಿಸ್: ವಿಶ್ವದ ಅತ್ಯಾಧುನಿಕ ಯುದ್ಧ ವಿಮಾನ ರಫೇಲ್ ಫ್ರಾನ್ಸ್‌ನಿಂದ ಟೇಕಾಫ್ ಆಗಿದ್ದು ಜುಲೈ 29ರಂದು ಭಾರತದಲ್ಲಿ ಲ್ಯಾಂಡ್ ಆಗಲಿದೆ.
ಮೊದಲ ಬ್ಯಾಚ್‌ನ 10 ಯುದ್ಧ ವಿಮಾನಗಳ ಪೈಕಿ 5 ಯುದ್ಧ ವಿಮಾನಗಳು ಭಾರತಕ್ಕೆ ಬರುತ್ತಿದ್ದು ಹರ್ಯಾಣದ ಅಂಬಾಲದಲ್ಲಿರುವ ವಾಯುನೆಲೆಯಲ್ಲಿ ಈ ವಿಮಾನಗಳು ನಿಯೋಜನೆಗೊಳ್ಳಲಿವೆ.
Advertisement
Advertisement
ಪೈಲಟ್, ಎಂಜಿನಿಯರಿಂಗ್ ಸೇರಿದಂತೆ ಭಾರತೀಯ ವಾಯುಸೇನೆಯ ಒಟ್ಟು 12 ಮಂದಿ ಈಗಾಗಲೇ ರಫೇಲ್ ಓಡಿಸಲು ಸಂಪೂರ್ಣ ತರಬೇತಿಯನ್ನು ಪಡೆದಿದ್ದಾರೆ.
Advertisement
ಫ್ರಾನ್ಸ್ ಮತ್ತು ಭಾರತದ ಮಧ್ಯೆ 7 ಸಾವಿರ ಕಿ.ಮೀ ಅಂತರವಿದೆ. ಹೀಗಾಗಿ ಯನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನಲ್ಲಿರುವ ಫ್ರಾನ್ಸ್ ವಾಯುನೆಲೆಯಲ್ಲಿ ಈ ವಿಮಾನಗಳು ಇಂಧನ ತುಂಬಿಸಲು ಒಂದು ಬಾರಿ ನಿಲುಗಡೆಯಾಗಲಿವೆ.
Advertisement
2016ರಲ್ಲಿ 59 ಸಾವಿರ ಕೋಟಿ ರೂ. ವೆಚ್ಚದಲ್ಲಿ 36 ರಫೇಲ್ ವಿಮಾನಗಳನ್ನು(28 ಸಿಂಗಲ್ ಸೀಟರ್, 8 ಡಬಲ್ ಸೀಟರ್) ಖರೀದಿಸುವ ಸಂಬಂಧ ಭಾರತ ಸರ್ಕಾರ ಫ್ರಾನ್ಸ್‌ನ ಡಸಾಲ್ಟ್ ಕಂಪನಿಯ ಜೊತೆ ಸಹಿ ಹಾಕಿತ್ತು. ಒಪ್ಪಂದ ಪ್ರಕಾರ 2020ರ ಜುಲೈಯಲ್ಲಿ ಮೊದಲ ಬ್ಯಾಚ್ ವಿಮಾನಗಳು ಭಾರತಕ್ಕೆ ಬರಬೇಕು ಡೆಡ್‌ಲೈನ್ ವಿಧಿಸಲಾಗಿತ್ತು. ಈ ಡೆಡ್‌ಲೈನ್‌ಗೆ ಅನುಗುಣವಾಗಿ ಮೊದಲ ಬ್ಯಾಚ್‌ನ 10 ವಿಮಾನಗಳು ಈಗ ಪೂರ್ಣ ಪ್ರಮಾಣದಲ್ಲಿ ಹಸ್ತಾಂತರವಾಗುತ್ತಿವೆ. ಈ ಪೈಕಿ 5 ವಿಮಾನಗಳು ಭಾರತಕ್ಕೆ ಬರುತ್ತಿದ್ದರೆ ಉಳಿದ 5 ವಿಮಾನಗಳು ಫ್ರಾನ್ಸ್‌ನಲ್ಲಿ ತರಬೇತಿ ನೀಡಲು ಬಳಕೆಯಾಗಲಿದೆ. ಎಲ್ಲ ವಿಮಾನಗಳು 2021ರ ಡಿಸೆಂಬರ್ ಕೊನೆಯಲ್ಲಿ ಭಾರತಕ್ಕೆ ಹಸ್ತಾಂತರವಾಗಲಿದೆ.
ಕಳೆದ ವರ್ಷದ ಅಕ್ಟೋಬರ್ ನವರಾತ್ರಿ ಸಮಯದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಫ್ರಾನ್ಸ್‌ಗೆ ತೆರಳಿದ್ದರು. ಈ ವೇಳೆ ಭಾರತದ ರಫೇಲ್ ವಿಮಾನಗಳಿಗೆ ಆಯುಧ ಪೂಜೆ ಮಾಡಿದ್ದರು.
ರಫೇಲ್ ವಿಶೇಷತೆ ಏನು?
ರಫೇಲ್ ವಿಮಾನ ಗಂಟೆಗೆ ಗರಿಷ್ಟ 2 ಸಾವಿರ ಕಿ.ಮೀ ವೇಗದಲ್ಲಿ ಹಾರಾಟ ನಡೆಸಬಲ್ಲದು. 9,500 ಕೆಜಿ ತೂಕದ ಈ ವಿಮಾನ 9,500 ಕೆಜಿ ತೂಕದ ಶಸ್ರ್ತಾಸ್ತ್ರಗಳನ್ನು ಹೊತ್ತುಕೊಂಡು ಹೋಗುವ ಸಾಮರ್ಥ್ಯವನ್ನು ಹೊಂದಿದೆ. ಈ ವಿಮಾನ ಇಳಿಯಲು ಮತ್ತು ಹಾರಾಟಕ್ಕೆ 400 ಮೀಟರ್ ಉದ್ದದ ರನ್‍ವೇ ಅಗತ್ಯವಿಲ್ಲ
"Beauty and the Beast"- #Rafale Fighter Aircraft. Ready to take off @MEAIndia @JawedAshraf5 @gouvernementFR @Dassault_OnAir @rajnathsingh @DefenceMinIndia @DDNewslive @ANI @DrSJaishankar @PMOIndia pic.twitter.com/TTAi6DHun7
— India in France (@IndiaembFrance) July 27, 2020
ವೈರಿಗಳನ್ನು ಗುರುತಿಸಲು ರಫೇಲ್ ವಿಮಾನದಲ್ಲಿ ಸ್ಪೆಕ್ಟ್ರಾ ಸಿಸ್ಟಂ ಇದೆ. ಥೇಲ್ಸ್ ಗ್ರೂಪ್ ಈ ಸ್ಪೆಕ್ಟ್ರಾ ಸಿಸ್ಟಂ ಅನ್ನು ಅಭಿವೃದ್ಧಿ ಪಡಿಸಿದೆ. ರೇಡಿಯೋ ಫಿಕ್ವೆನ್ಸಿ, ರೇಡಾರ್ ವಾರ್ನಿಂಗ್ ರಿಸೀವರ್, ಲೇಸರ್ ವಾರ್ನಿಂಗ್, ಮಿಸೈಲ್ ವಾರ್ನಿಂಗ್, ರೇಡಾರ್ ಜಾಮರ್ ಗಳನ್ನು ಸ್ಪೆಕ್ಟ್ರಾ ಸಿಸ್ಟಂ ನಲ್ಲಿರುವ ಸೆನ್ಸರ್ ಗಳು ಗ್ರಹಿಸುತ್ತವೆ. 1800 ಕಿ.ಮೀ ವ್ಯಾಪ್ತಿ ವಿರೋಧಿಗಳ ಕಾರ್ಯ ಚಟುವಟಿಕೆಯನ್ನು ಗ್ರಹಿಸುವ ಸಾಮರ್ಥ್ಯ ಹೊಂದಿದೆ. ಈ ಕಾರಣಕ್ಕಾಗಿಯೇ ರಫೇಲ್ ವಿಮಾನ ಬೇರೆ ಯುದ್ಧ ವಿಮಾನಗಳಿಗಿಂತ ಭಿನ್ನವಾಗಿ ಗುರುತಿಸಿಕೊಂಡಿದೆ. ಇದನ್ನೂ ಓದಿ: ಲಡಾಖ್ ಗಡಿಯಲ್ಲಿ ಫೈಟರ್ ಜೆಟ್ ರಫೇಲ್ ನಿಯೋಜಿಸಲು ಚಿಂತನೆ
Rafale aircrafts maneuvered by the world’s best pilots, soar into the sky. Emblematic of new heights in India-France defence collaboration #ResurgentIndia #NewIndia@IAF_MCC @MeaIndia @rajnathsingh @Dassault_OnAir @DefenceMinIndia @PMOIndia@JawedAshraf5 @DDNewslive @ANI pic.twitter.com/FrEQYROWSv
— India in France (@IndiaembFrance) July 27, 2020
ಡಸಾಲ್ಟ್ ಕಂಪನಿ 1986ರಲ್ಲಿ ಮೊದಲ ರಫೇಲ್ ವಿಮಾನವನ್ನು ನಿರ್ಮಿಸಿದ್ದು, ಭಾರತ ಅಲ್ಲದೇ ಈಜಿಪ್ಟ್, ಕತಾರ್ ದೇಶಗಳು ರಫೇಲ್ ಖರೀದಿ ಸಂಬಂಧ ಡಸಾಲ್ಟ್ ಜೊತೆ ಮಾತುಕತೆ ನಡೆಸಿವೆ.
ಯಾವ ದೇಶ ಏನು ಬೇಡಿಕೆ ಇಡುತ್ತದೋ ಆ ಬೇಡಿಕೆಗೆ ಅನುಗುಣವಾಗಿ ಡಸಾಲ್ಟ್ ಕಂಪನಿ ರಫೇಲ್ ವಿಮಾನವನ್ನು ಅಭಿವೃದ್ಧಿ ಪಡಿಸುತ್ತದೆ. ಲೋ ಬ್ಯಾಂಡ್ ಜಾಮರ್, 10 ಗಂಟೆಗಳ ಹಾರಾಟ ಮಾಹಿತಿ ಸಂಗ್ರಹ, ಇಸ್ರೇಲಿ ಹೆಲ್ಮೆಟ್ ಮೌಂಟೆಡ್ ಡಿಸ್ಪ್ಲೇ, ರೆಡಾರ್ ವಾರ್ನಿಂಗ್ ಇನ್ಫ್ರಾರೆಡ್ ಶೋಧ ಮತ್ತು ಟ್ರ್ಯಾಕಿಂಗ್ ಸೇರಿದಂತೆ ಹಲವು ಅತ್ಯಾಧುನಿಕ ಉಪಕರಣಗಳ ಹಾಗೂ ಸೌಲಭ್ಯಗಳನ್ನು ಅಳವಡಿಸಬೇಕೆಂದು ಭಾರತ ಬೇಡಿಕೆ ಇಟ್ಟಿತ್ತು.
Ambassador @JawedAshraf5
visited the Rafale Assembly line, training facilities and interacted with officials from @Dassault_OnAir@gouvernementFR @MEAIndia @IndianDiplomacy @DDNewslive @ANI @IAF_MCC @DefenceMinIndia @rajnathsingh pic.twitter.com/ccrEPIVwkY
— India in France (@IndiaembFrance) July 27, 2020