ಬಳ್ಳಾರಿಯಲ್ಲಿ ಕೊರೊನಾಗೆ ಹತ್ತನೇ ಬಲಿ- 75 ವರ್ಷದ ವೃದ್ಧ ಸಾವು

Public TV
1 Min Read
CORONA VIRUS 4

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ ಹತ್ತಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಹೊಸಪೇಟೆ ಮೂಲದ ನಿವಾಸಿ 75 ವರ್ಷದ ವೃದ್ಧ ಮಹಾಮಾರಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಚಿಕಿತ್ಸೆಗೆಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಆತನ ಗಂಟಲು ದ್ರವ ಸಂಗ್ರಹ ಮಾಡಲಾಗಿತ್ತು. ನಂತರ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಎಸ್‍ಒಪಿ ಪ್ರಕಾರ ವ್ಯಕ್ತಿಯ ಅಂತ್ಯಕ್ರಿಯೆಯನ್ನು ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.

CORONA VIRUS 1 1 2

ಬಳ್ಳಾರಿಯಲ್ಲಿ ಈ ವರೆಗೆ ಒಟ್ಟು 645 ಜನರಿಗೆ ಸೋಂಕು ತಗುಲಿದ್ದು, 292 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 344 ಜನ ಚಿಕಿತ್ಸೆ ಪಡೆಯುತ್ತುದ್ದಾರೆ. ಒಟ್ಟು 10 ಜನ ಸಾವನ್ನಪ್ಪಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *