ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು ಸಿಬಿಐ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ.
ಸಂಜಯ್‌ನಗರದ ಸಿಬಿಐ ಕಚೇರಿಯಲ್ಲಿ ರೋಷನ್ ಬೇಗ್ ಅವರನ್ನು ಬೆಳಗ್ಗೆಯಿಂದ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Advertisement
Advertisement
ಐಎಂಎ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಹೆಸರು ಮೊದಲು ಕೇಳಿ ಬಂದಿತ್ತು. ಆರೋಪಿ ಮನ್ಸೂರ್ ಖಾನ್ ನಿಂದ ಸುಮಾರು 200 ಕೋಟಿಗೂ ಹೆಚ್ಚು ಹಣವನ್ನು ರೋಷನ್ ಬೇಗ್ ಪಡೆದಿದ್ದಾರೆ. ಐಷಾರಾಮಿ ಕಾರು ಸೇರಿದಂತೆ ಬಹುತೇಕ ಬೆಲೆ ಬಾಳುವ ವಸ್ತುಗಳನ್ನು ಮನ್ಸೂರ್ ಖಾನ್ ಉಡುಗೊರೆ ನೀಡಿದ್ದ ಎಂಬ ಆರೋಪ ಕೇಳಿ ಬಂದಿತ್ತು.
Advertisement
ಶಿವಾಜಿನಗರದ ಕಾಂಗ್ರೆಸ್ ಶಾಸಕರಾಗಿದ್ದ ರೋಷನ್ ಬೇಗ್ ದಿಢೀರ್ ಬೆಳವಣಿಗೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಿಬಿಐ ತನಿಖೆಯಿಂದ ಪಾರಾಗಲು ರೋಷನ್ ಬೇಗ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದರು.
Advertisement
ಗ್ರಾಹಕರಿಗೆ ವಂಚನೆ ಹೇಗೆ?
ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು.
ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ ಕಳೆದ ಏಪ್ರಿಲ್, ಮೇ ತಿಂಗಳಿನಲ್ಲಿ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ 2019ರ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದ್ದರು.