ಬಹುಮತ ಬರದಿದ್ರೂ ಬಿಎಸ್‍ವೈಯಂತವರಿಗೆ ಮಾತ್ರ ಸರ್ಕಾರ ರಚಿಸಲು ಸಾಧ್ಯ: ಅರಗ ಜ್ಞಾನೇಂದ್ರ

Public TV
1 Min Read
araga jnanendr

ಶಿವಮೊಗ್ಗ: ಕೆಲವು ಮಾಧ್ಯಮಗಳಲ್ಲಿ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬರುತ್ತಿದೆ. ಸದ್ಯಕ್ಕೆ ಈ ವಿಷಯ ಅಪ್ರಸ್ತುತ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿದರೆ ನಾನು ಅತ್ಯಂತ ಸಂತೋಷ ಪಡುತ್ತೇನೆ ಎಂದು ಶಾಸಕ ಅರಗ ಜ್ಞಾನೇಂದ್ರ ಹೇಳಿದ್ದಾರೆ.

cm bsy

ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವಾಗಲಿ, ಮಂತ್ರಿ ಸ್ಥಾನವಾಗಲಿ ಖಾಲಿ ಇಲ್ಲ. ಮುಖ್ಯಮಂತ್ರಿ ಆಗಿ ಯಡಿಯೂರಪ್ಪ ಅವರು ಅತ್ಯಂತ ಸಮರ್ಥವಾಗಿ ರಾಜ್ಯವನ್ನು ಮುನ್ನಡೆಸುತ್ತಿದ್ದಾರೆ. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿದರೆ ನಾನು ಅತ್ಯಂತ ಸಂತೋಷಪಡುತ್ತೇನೆ ಎಂದು ತಿಳಿಸಿದರು.

Araga Jnanendra

ಯಡಿಯೂರಪ್ಪ ಅವರು ಕೋವಿಡ್ ಸಮಯದಲ್ಲಿ, ಪ್ರವಾಹ ಸಂದರ್ಭದಲ್ಲಿ ಒಳ್ಳೆಯ ಕೆಲಸ ಮಾಡಿದ್ದಾರೆ. ಇದುವರೆಗೂ ಯಾವುದೇ ಮುಖ್ಯಮಂತ್ರಿ ಮಾಡದಂತಹ ಕೆಲಸವನ್ನು ಯಡಿಯೂರಪ್ಪ ಮಾಡಿದ್ದಾರೆ. ಅಲ್ಲದೇ ಬಹುಮತ ಬರದಿದ್ದರೂ ಸರ್ಕಾರ ರಚನೆ ಮಾಡುವ ಕೆಲಸವನ್ನು ಯಡಿಯೂರಪ್ಪನಂತವರು ಮಾತ್ರ ಮಾಡಬಹುದು. ಯಡಿಯೂರಪ್ಪ ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದರು. ಇದನ್ನೂ ಓದಿ: ಸಿಎಂ ಬದಲಾವಣೆ ಚರ್ಚೆಯ ಬೆನ್ನಲ್ಲೇ ಕೇಂದ್ರ ಸಚಿವರ ಜೊತೆ ಬೊಮ್ಮಾಯಿ ರಹಸ್ಯ ಮಾತುಕತೆ

Share This Article
Leave a Comment

Leave a Reply

Your email address will not be published. Required fields are marked *