ಕೋಲಾರ: ಹಬ್ಬದ ದಿನವೇ ಪತ್ನಿಯನ್ನ ಪತಿಯೇ ಕೊಲೆಗೈದಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಪಂತನಹಳ್ಳಿಯಲ್ಲಿ ನಡೆದಿದೆ.
20 ವರ್ಷದ ನಂದಿನಿ ಗಂಡ ಗಣೇಶ್ ನಿಂದ ಕೊಲೆಯಾದ ಮಹಿಳೆ. ನಂದಿನಿ ಇತ್ತೀಚೆಗೆ ಮಗುವಿಗೆ ಜನ್ಮ ನೀಡಿದ್ದರು. ಆರೋಪಿ ಗಣೇಶ್ ಪತ್ನಿಯ ನಡೆತ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದನು. ಇದೇ ಹಿನ್ನೆಲೆ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಆರೋಪಿ ಗಣೇಶ್ ನನಜ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
- Advertisement 2
- Advertisement 3
ಮೃತದೇಹವನ್ನು ಪೊಲೀಸರು ವಶಕ್ಕೆ ಪಡೆದು ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪೊಲೀಸರು ಕುಟುಂಬಸ್ಥರಿಂದ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದ್ದು, ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಈ ಸಂಬಂಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.