ಪುಣೆ: ಕಾರಿನ ಬಾನೆಟ್ ಮೇಲೆ ಕುಳಿತು ಮೆರವಣಿಗೆ ಮಾಡಿದ್ದ ವಧುವಿಗೆ ಪೊಲೀಸರು ದಂಡ ವಿಧಿಸಿದ್ದಾರೆ.
23 ವರ್ಷದ ವಧು ಎಸ್‍ಯುವಿ ಕಾರಿನ ಬಾನೆಟ್ ಮೇಲೆ ಕುಳಿತು ಮೆರವಣಿಗೆ ಹೊರಟಿದ್ದಳು. ಪುಣೆ- ಸಾಸ್ವಾಡ್ ರಸ್ತೆಯಲ್ಲಿ ಕಾರು ಸಂಚರಿಸಿತ್ತು. ಬೈಕಿನ ಕುಳಿತು ವ್ಯಕ್ತಿಯೊಬ್ಬ ವಿಡಿಯೋ ಚಿತ್ರೀಕರಿಸಿದ್ದ.
Advertisement
Advertisement
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವೈರಲ್ ಆದ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಮೋಟಾರು ವಾಹನ ಕಾಯ್ದೆಯ ಸಂಬಂಧಿತ ಸೆಕ್ಷನ್, ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಅಡಿ ಕಾರಿನ ಮಾಲೀಕ, ಯುವತಿ, ಚಾಲಕ, ವಿಡಿಯೋಗ್ರಾಫರ್ ಮೇಲೆ ದಂಡ ವಿಧಿಸಿದ್ದಾರೆ. ಕೊರೊನಾ ನಡುವೆಯೂ ಅಲ್ಲಿದ್ದವರು ರೂ ಮಾಸ್ಕ್ ಧರಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ : ಅನಂತ್ ನಾಗ್‍ಗೆ ಪದ್ಮ ಪ್ರಶಸ್ತಿ ನೀಡುವಂತೆ ಅಭಿಯಾನ
Advertisement
ವಾಹನವು ಸಾಸ್ವಾಡ್‍ನಿಂದ ವಿವಾಹದ ಸ್ಥಳಕ್ಕೆ ತೆರಳುತ್ತಿತ್ತು. ಪುಣೆ-ಸಾಸ್ವಾಡ್ ರಸ್ತೆಯ ಉದ್ದಕ್ಕೂ ಪ್ರಯಾಣಿಸುತ್ತಿದ್ದ ಸನ್ನಿವೇಶವನ್ನು ಚಿತ್ರೀಕರಿಸಲಾಗುತ್ತಿತ್ತು.
Advertisement
#Maharashtra: Bride in Pune booked following a 'wedding stunt' where she sat on top of a car's bonnet.
Kajal Iyer with details. pic.twitter.com/s2oWDXCmeo
— TIMES NOW (@TimesNow) July 14, 2021