Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಾಬ್ರಿ ಮಸೀದಿ ಧ್ವಂಸ ಆಕಸ್ಮಿಕ ಘಟನೆ – ಎಲ್ಲ ಆರೋಪಿಗಳು ಖುಲಾಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಾಬ್ರಿ ಮಸೀದಿ ಧ್ವಂಸ ಆಕಸ್ಮಿಕ ಘಟನೆ – ಎಲ್ಲ ಆರೋಪಿಗಳು ಖುಲಾಸೆ

Latest

ಬಾಬ್ರಿ ಮಸೀದಿ ಧ್ವಂಸ ಆಕಸ್ಮಿಕ ಘಟನೆ – ಎಲ್ಲ ಆರೋಪಿಗಳು ಖುಲಾಸೆ

Public TV
Last updated: September 30, 2020 4:01 pm
Public TV
Share
3 Min Read
l k advani murli manohar joshi
SHARE

ಲಕ್ನೋ: ಬಾಬ್ರಿ ಮಸೀದಿ ಧ್ವಂಸ ಪೂರ್ವ ನಿಯೋಜಿತ ಅಲ್ಲ. ಇದೊಂದು ಆಕಸ್ಮಿಕ ಘಟನೆ ಎಂದು ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.

ಕೋರ್ಟ್‌ ಈ ತೀರ್ಪು ಪ್ರಕಟಿಸುವ ಮೂಲಕ 28ವರ್ಷಗಳ ಹಳೆಯ ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ ಸೇರಿದಂತೆ ಎಲ್ಲ ಆರೋಪಿಗಳನ್ನು ಕೋರ್ಟ್‌ ಖುಲಾಸೆಗೊಳಿಸಿದೆ.

ಬಾಬ್ರಿ ಮಸೀದಿ ಧ್ವಂಸ ಪೂರ್ವನಿಯೋಜಿತ ಕೃತ್ಯ ಅಲ್ಲ, ಆರೋಪಿತರ ವಿರುದ್ಧ ಬಲವಾದ ಸಾಕ್ಷ್ಯಗಳಿಲ್ಲ: ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು #BabriMasjid #BabriDemolitionCase #BabriMasjidDemolition

— PublicTV (@publictvnews) September 30, 2020

ತೀರ್ಪು ನೀಡುವ ದಿನದಂದು ಎಲ್ಲ 32 ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿರಬೇಕು ಎಂದು ನ್ಯಾ.ಸುರೇಂದ್ರ ಕುಮಾರ್ ಯಾದವ್‌ ಸೆ.16 ರಂದು ಸೂಚಿಸಿದ್ದ ಹಿನ್ನೆಲೆಯಲ್ಲಿ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಬಿಜೆಪಿ ಹಿರಿಯ ಮುಖಂಡ ಮುರಳಿ ಮನೋಹರ್ ಜೋಶಿ, ಉಮಾ ಭಾರತಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರಾಗಿದ್ದರು. ಉಳಿದಂತೆ ಕಲ್ಯಾಣ್‌ ಸಿಂಗ್‌, ವಿನಯ್‌ ಕಟಿಯಾರ್‌, ಸಾಕ್ಷಿ ಮಹಾರಾಜ್‌, ಲಾಲು ಸಿಂಗ್‌, ಬಿಬಿ ಶರಣ್‌ ಸಿಂಗ್‌ ಸೇರಿದಂತೆ ಎಲ್ಲ ಆರೋಪಿಗಳು ಕೋರ್ಟ್‌ ಕೊಠಡಿಯಲ್ಲಿ ಹಾಜರಿದ್ದರು.

ಬಾಬ್ರಿ ಮಸೀದಿ ಮಹಾತೀರ್ಪು: ಎಲ್ಲ 32 ಆರೋಪಿಗಳು ಖುಲಾಸೆ, ಬಿಜೆಪಿ ನಾಯಕರಿಗೆ ಬಿಗ್‌ ರಿಲೀಫ್ #BabriVerdict #BabriMasjidDemolition

— PublicTV (@publictvnews) September 30, 2020

ತೀರ್ಪು ಪ್ರಕಟಿಸುವ ಹಿನ್ನೆಲೆಯಲ್ಲಿ ಕೋರ್ಟ್‌ ಸುತ್ತ ಮುತ್ತ ಬ್ಯಾರಿಕೇಡ್‌ ಅಳವಡಿಸಿ ಬಿಗಿ ಬಂದೋಬಸ್ತ್‌ ಮಾಡಲಾಗಿತ್ತು. ಕೋರ್ಟ್‌ ಇರುವ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ಬದಲಾವಣೆ ಮಾಡಲಾಗಿತ್ತು.

UMABHARATHI

ಸುಪ್ರೀಂ ಸೂಚನೆ ಏನಿತ್ತು?
2017ರ ಏಪ್ರಿಲ್‌ 19 ಎಂದು ಪ್ರತಿನಿತ್ಯ ವಿಚಾರಣೆ ನಡೆಸಿ 2 ವರ್ಷದ ಒಳಗಡೆ ತೀರ್ಪು ಪ್ರಕಟಿಸುವಂತೆ ಸಿಬಿಐ ವಿಶೇಷ ಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿತ್ತು. ಲಕ್ನೋ ಸಿಬಿಐ ನ್ಯಾಯಾಲಯದಲ್ಲಿ ಕರಸೇವಕರ ವಿರುದ್ಧದ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೆ 8 ವಿಐಪಿಗಳ ವಿರುದ್ಧ ರಾಯಬರೇಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. 2017ರ ಏಪ್ರಿಲ್‌ನಲ್ಲಿ ರಾಯಬರೇಲಿ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ಲಕ್ನೋ ಸಿಬಿಐ ನ್ಯಾಯಾಲಯಕ್ಕೆ ಸುಪ್ರೀಂ ಕೋರ್ಟ್‌ ವರ್ಗಾಯಿಸಿತ್ತು.

Supreme Court

ಏನಿದು ಪ್ರಕರಣ?
1992 ಡಿಸೆಂಬರ್‌ 6ರಂದು ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 351 ಸಾಕ್ಷಿಗಳನ್ನು ಹಾಗೂ 600 ದಾಖಲೆ ಪ್ರತಿಗಳನ್ನು ವಿಶೇಷ ನ್ಯಾಯಾಲಯಕ್ಕೆ ನೀಡಿದೆ. ಆರಂಭಿಕವಾಗಿ 48 ಮಂದಿಯನ್ನು ಆರೋಪಿಗಳೆಂದು ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಆದರೆ ಮೂರು ದಶಕಗಳಿಂದ ವಿಚಾರಣೆ ನಡೆಯುತ್ತಿದ್ದ ಕಾರಣ 48 ಜನ ಆರೋಪಿಗಳ ಪೈಕಿ 16 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 32 ಆರೋಪಿಗಳ ವಿರುದ್ಧ ವಿಚಾರಣೆ ನಡೆಯುತ್ತಿತ್ತು.

Senior bjp leader and accused in Babri Masjid demolition case joining the court via video conference. pic.twitter.com/IDTV07qsQ7

— Nistula Hebbar (@nistula) September 30, 2020

ಯಾವೆಲ್ಲ ಸೆಕ್ಷನ್‌?
ಸೆಕ್ಷನ್ 153 ಎ(ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು),ಸೆಕ್ಷನ್ 153 ಬಿ(ರಾಷ್ಟ್ರೀಯ ಐಕ್ಯತೆಗೆ ಧಕ್ಕೆ ತರುವ ಹೇಳಿಕೆ), ಸೆಕ್ಷನ್ 505( ಸಾರ್ವಜನಿಕ ಕಿಡಿಗೇಡಿತನಕ್ಕೆ ಕೇಡಿಗೆ ಕಾರಣವಾಗುವ ಹೇಳಿಕೆ) ಅಡಿ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿತ್ತು.

ವಾದ ಏನಿತ್ತು?
ಈ ಆರೋಪಿಗಳು ಮಸೀದಿಯನ್ನು ಧ್ವಂಸಗೊಳಿಸಲು ಕರ ಸೇವಕರಿಗೆ ಪ್ರಚೋದನೆ ನೀಡಿದ್ದರು ಎಂದು ಸಿಬಿಐ ವಾದಿಸಿದ್ದರೆ ಆರೋಪಿಗಳು ತಮ್ಮ ವಿರುದ್ಧ ಯಾವುದೇ ಸಾಕ್ಷ್ಯಗಳು ಇಲ್ಲ. ಕಾಂಗ್ರೆಸ್‌ ಸರ್ಕಾರ ಉದ್ದೇಶಪೂರ್ವಕವಾಗಿ ನಮ್ಮನ್ನು ಸಿಕ್ಕಿ ಹಾಕಿಸಲು ರೂಪಿಸಿದ ರಾಜಕೀಯ ಸಂಚು ಎಂದು ವಾದಿಸಿದ್ದರು.

babri masjid

32 ಮಂದಿಆರೋಪಿಗಳು ಯಾರು?
ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಸುಧೀರ್ ಕಕ್ಕರ್, ಸತೀಶ್ ಪ್ರಧಾನ್, ರಾಮ್ ಚಂದ್ರ ಖತ್ರಿ, ಸಂತೋಷ್ ದುಬೆ, ಓಂ ಪ್ರಕಾಶ್ ಪಾಂಡೆ, ಕಲ್ಯಾಣ್ ಸಿಂಗ್, ಉಮಾ ಭಾರತಿ, ರಾಮ್ ವಿಲಾಸ್ ವೇದಾಂತಿ, ವಿನಯ್ ಕಟಿಯಾರ್, ಪ್ರಕಾಶ್ ಶರ್ನಾ, ಗಾಂಧಿ ಸಿಂಗ್ ಕಮಲೇಶ್ ತ್ರಿಪಾಠಿ, ಬ್ರಿಜ್ ಭೂಷಣ್ ಸಿಂಗ್, ರಾಮ್ಜಿ ಗುಪ್ತಾ, ಮಹಂತ್ ನೃತ್ಯ ಗೋಪಾಲ್ ದಾಸ್, ಚಂಪತ್ ರಾಯ್, ಸಾಕ್ಷಿ ಮಹಾರಾಜ್, ವಿನಯ್ ಕುಮಾರ್ ರೈ, ನವೀನ್ ಭಾಯ್ ಶುಕ್ಲಾ, ಧರ್ಮದಾಸ್, ಜೈ ಭಗವಾನ್ ಗೋಯೆಲ್, ಅಮರನಾಥ್ ಗೋಯೆಲ್, ಸಾಧ್ವಿ ರಿತಂಬರ, ಪವನ್‌ ಪಾಂಡೆ, ವಿಜಯ್‌ ಬಹದ್ದೂರ್‌ ಸಿಂಗ್‌, ಆರ್‌ಎಂ ಶ್ರೀವತ್ಸ, ಧರ್ಮೇಂದ್ರ ಸಿಂಗ್ ಗುಜ್ಜರ್.

TAGGED:Babri MasjidBabri Masjid VerdictcbiLK AdvaniUma Bhartiಅಡ್ವಾಣಿಉತ್ತರ ಪ್ರದೇಶಬಾಬ್ರಿ ಮಸೀದಿಬಿಜೆಪಿಮುರಳಿ ಮನೋಹರ್ ಜೋಶಿಸಿಬಿಐ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

KODI MAT SRI
Bidar

ರಾಜ್ಯ ರಾಜಕೀಯದಲ್ಲಿ ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಬದಲಾವಣೆ ಇಲ್ಲ: ಕೋಡಿಮಠದ ಶ್ರೀ

Public TV
By Public TV
22 minutes ago
Mukesh Ambani
Latest

2036ರ ಒಲಿಂಪಿಕ್ಸ್‌ ಭಾರತಕ್ಕೆ ತರಲು ಪ್ರಧಾನಿ ಮೋದಿಗೆ ನಮ್ಮ ಬೆಂಬಲವಿದೆ: ಮುಕೇಶ್‌ ಅಂಬಾನಿ

Public TV
By Public TV
26 minutes ago
young woman commits suicide due to stomach pain during menstruation in tumakuru
Crime

ಋತುಚಕ್ರದ ವೇಳೆ ಹೊಟ್ಟೆ ನೋವು ತಾಳದೆ ನೇಣಿಗೆ ಶರಣಾದ ಯುವತಿ

Public TV
By Public TV
49 minutes ago
delhi women shot dead
Crime

ಗಂಡನ ಕೊಲೆ ಕೇಸ್‌ ಪ್ರಮುಖ ಸಾಕ್ಷಿಯಾಗಿದ್ದ ಮಹಿಳೆಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
Kerala MLA Rahul Mamkootathil
Latest

ಮದುವೆ ಹೆಸರಲ್ಲಿ ರೇಪ್, ಗರ್ಭಪಾತಕ್ಕೆ ಒತ್ತಾಯ – ಕೇರಳದ ಕಾಂಗ್ರೆಸ್ ಉಚ್ಚಾಟಿತ ಶಾಸಕ ಅರೆಸ್ಟ್

Public TV
By Public TV
1 hour ago
Hassan Son Kills Father
Crime

ಕೌಟುಂಬಿಕ ಕಲಹ – ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹತ್ಯೆಗೈದ ಪುತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?