ಚೆನ್ನೈ: ಕಾಲಿವುಡ್ ನಟಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.
ದಕ್ಷಿಣ ಭಾರತದ ಫೇಮಸ್ ತಾರೆಯರಾದ ಸೂಪರ್ ಸ್ಟಾರ್ ಮಹೇಶ್ ಬಾಬು, ಮೋಹನ್ ಲಾಲ್, ಕಮಲ್ ಹಾಸನ್ ಸೇರಿದಂತೆ ಹಲವಾರು ಕಲಾವಿದರು ಕೊರೊನಾ ವೈರಸ್ ಲಸಿಕೆ ಪಡೆದುಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಕಾಲಿವುಡ್ ಲೇಡಿ ಸೂಪರ್ ಸ್ಟಾರ್ ನಟಿ ನಯನತಾರಾ ತಮ್ಮ ಬಾಯ್ ಫ್ರೆಂಡ್ ವಿಘ್ನೇಶ್ ಶಿವನ್ ಇಬ್ಬರು ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ.
ಲಸಿಕೆ ಪಡೆದ ಫೋಟೋವನ್ನು ವಿಘ್ನೇಶ್ ಶಿವನ್ ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಜೊತೆಗೆ ದಯವಿಟ್ಟು ಲಸಿಕೆ ಪಡೆಯಿರಿ. ಸುರಕ್ಷಿತವಾಗಿರಿ, ಮನೆಯೊಳಗೆ ಇರಿ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ. ಫೋಟೋದಲ್ಲಿ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಮಾಸ್ಕ್ ಧರಿಸಿಕೊಂಡು ಲಸಿಕೆ ಪಡೆದುಕೊಳ್ಳುತ್ತಿರುವುದನ್ನು ಕಾಣಬಹುದಾಗಿದೆ.
View this post on Instagram
ಸದ್ಯ ನಯನತಾರಾ ಸೂಪರ್ ಸ್ಟಾರ್ ರಜನಿಕಾಂತ್‍ರವರ ಅಣ್ಣಾತೆ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಇತ್ತೀಚೆಗೆ ಹೈದರಾಬಾದ್‍ನಲ್ಲಿ ನಡೆದ ಶೂಟಿಂಗ್‍ನಲ್ಲಿ ಭಾಗಿಯಾಗಿದ್ದರು. ಹೈದರಾಬಾದ್‍ನಿಂದ ಚೆನ್ನೈಗೆ ಹಿಂದಿರುಗಿದ ನಂತರ ತಲೈವಾ ರಜನಿಕಾಂತ್ ಕೂಡ ತಮ್ಮ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರು.
View this post on Instagram