ವಿಜಯಪುರ: ಸೂಕ್ತ ಬೆಲೆ ಸಿಗದ ಕಾರಣ ಅನ್ನದಾತ ತನ್ನ ಬಾಳೆಹಣ್ಣಿನ ಗದ್ದೆಗೆ ತಾನೇ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದಲ್ಲಿ ನಡೆದಿದೆ.
Advertisement
ರೈತ ಉಸ್ಮಾನಸಾಬ್ ಬಾಳೆ ಹಣ್ಣಿಗೆ ಸೂಕ್ತ ಬೆಲೆ ಸಿಗದ ಕಾರಣ ಹಾಗೂ ಲಾಕ್‍ಡೌನ್ ಪರಿಣಾಮದಿಂದ ಬಾಳೆ ಹಣ್ಣು ಮಾರಾಟವಾಗದ್ದಕ್ಕೆ ಮನನೊಂದು ಈ ರೀತಿ ಮಾಡಿದ್ದಾರೆ. ತಮ್ಮ ತೋಟದಲ್ಲಿನ 1,200 ಬಾಳೆ ಗಿಡಗಳಿಗೆ ಬೆಂಕಿ ಹಚ್ಚಿ ಸರ್ಕಾರಕ್ಕೆ ಹಿಡಿಶಾಪ ಹಾಕಿದ್ದಾರೆ. ಕಷ್ಟ ಪಟ್ಟು ಮೂರು ವರ್ಷಗಳಿಂದ ಮಕ್ಕಳಂತೆ ಜೋಪಾನ ಮಾಡಿದ್ದ ಬೆಳೆದ ಬಾಳೆಗೆ ಬೆಲೆಯಿಲ್ಲದ್ದಕ್ಕೆ ದಾನ ಮಾಡಿದ್ದಾರೆ. ಉಳಿದ ಬಾಳೆಗಿಡಗಳನ್ನೆಲ್ಲ ಸದ್ಯ ಸುಟ್ಟು ಹಾಕಿದ್ದಾರೆ. ಇದನ್ನೂ ಓದಿ: ಕೊರೊನಾಗೆ ಹೆದರಿ ಊರು ಬಿಟ್ಟು ಗುಡಿಸಲಲ್ಲಿ ಕುಟುಂಬ ಜೀವನ
Advertisement
Advertisement
ಸಂಕಷ್ಟದ ಮೇಲೆ ಸಂಕಷ್ಟ ನೀಡುತ್ತಿರುವ ಕೊರೊನಾ ಮಹಾಮಾರಿಯಿಂದ ರೈತರ ಗೋಳು ಇಮ್ಮಡಿಯಾದಂತಾಗಿದೆ. ರೈತರು ಬಳೆ ಹಾನಿಗೊಳಿಸುತ್ತಿರುವ ನೂರಾರು ಘಟನೆಗಳು ನಡೆಯುತ್ತಿದ್ದು, ರೈತರ ಗೋಳು ಕೇಳೋರು ಯಾರು ಎನ್ನುವಂತಾಗಿದೆ.