ಬೆಂಗಳೂರು: ಕೆಎಸ್ಆರ್‌ಟಿಸಿ ಬಸ್ ಗಳಲ್ಲಿ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರು ಬಿಎಂಟಿಸಿ ನೌಕರರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
Advertisement
ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಬಂಧಿತ ಗಾಂಜಾ ಪೆಡ್ಲರ್ ಗಳು. ಬಿಎಂಟಿಸಿಯಲ್ಲಿ ಚಾಲಕ ಮತ್ತು ನಿರ್ವಾಹಕರಾಗಿ ಆರೋಪಿಗಳಿಬ್ಬರು ಕೂಡ ಕೆಲಸ ನಿರ್ವಹಿಸುತ್ತಿದ್ದರು, ಸರ್ಕಾರಿ ಬಸ್ ಗಳಲ್ಲಿ ಮುಕ್ತ ಓಡಾಟಕ್ಕೆ ಅವಕಾಶ ಹಿನ್ನೆಲೆ ಕಲಬುರಗಿಯಿಂದ ಗಾಂಜಾ ತಂದು ಬೆಂಗಳೂರು ನಗರದಲ್ಲಿ ಮಾರಾಟ ಮಾಡುತ್ತಿದ್ದರು. ಈ ಮೂಲಕ ತಮಗೆ ಕಲ್ಪಿಸಿದ್ದ ಸೌಲಭ್ಯವನ್ನು ದುರ್ಬಳಕೆ ಮಾಡಿ ಕೃತ್ಯ ಎಸಗಿದ್ದಾರೆ. ಇದನ್ನೂ ಓದಿ: ಮಗಳ ಜೊತೆಗೆ ತಂದೆಯೂ SSLC ಪರೀಕ್ಷೆ ಬರೆದು ಪಾಸ್
Advertisement
Advertisement
ಬಂಧಿತ ಆರೋಪಿಗಳಿಂದ 9.8 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಕೆಂಗೇರಿ ಸಮೀಪದ ತುರಹಳ್ಳಿ ಅರಣ್ಯ ಪ್ರದೇಶವನ್ನು ಅಡ್ಡೆ ಮಾಡಿಕೊಂಡಿದ್ದ ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಕಳೆದ ಮೂರು ವರ್ಷಗಳಿಂದ ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದರು. ವಿಜಯಪುರ ಮತ್ತು ಕಲಬುರಗಿಯಿಂದ ಗಾಂಜಾ ತಂದು ಕೆ.ಜಿ ಗೆ 40 ರಿಂದ 50 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತಿದ್ದರು. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎನ್‍ಡಿಪಿಎಸ್ ಕಾಯ್ದೆ ಅಡಿ ಕೇಸ್ ದಾಖಲಾಗಿದ್ದು, ಇಬ್ಬರನ್ನು ಕೂಡ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Advertisement