ಶಿವಮೊಗ್ಗ: ಈಗಾಗಲೇ ಕೊರೊನಾ ಸೋಂಕಿನಿಂದ ಗುಣಮುಖರಾಗಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮುಂದಿನ ದಿನಗಳಲ್ಲಿ ಯಾವುದೇ ಅನಾರೋಗ್ಯ ಬರದಿರಲಿ ಎಂದು ಪೂಜೆ ಸಲ್ಲಿಸಲಾಗಿದೆ.
ನಿನ್ನೆಯಷ್ಟೇ ಸಿಎಂ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಆಗದಿರಲಿ ಎಂದು ಹಾರೈಸಿ ವಿಧಾನ ಪರಿಷತ್ ಸದಸ್ಯ ರುದ್ರೇಗೌಡರ ನೇತೃತ್ವದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ನಗರದ ಕೋಟೆ ರಸ್ತೆಯ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಪೂಜೆಯಲ್ಲಿ ಸಂಸದ ಬಿ.ವೈ ರಾಘವೇಂದ್ರ, ಸಿಎಂ ಬಿಎಸ್ ವೈ ಪುತ್ರಿ ಅರುಣಾದೇವಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಗೂ ಬಿಎಸ್ ವೈ ಅಭಿಮಾನಿಗಳು ಭಾಗವಹಿಸಿ ಬಿಎಸ್‍ವೈಗಾಗಿ ಪ್ರಾರ್ಥಿಸಿದರು.