– ಸಿಎಂ, ಗೃಹ ಸಚಿವರು ಬೇಗ ಗುಣಮುಖರಾಗಲಿ
ಬೆಂಗಳೂರು: ಮುಖ್ಯಮಂತ್ರಿ ಎಸ್ ಯಡಿಯೂಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ವಿಚಾರ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಗಿದೆ. ಬಿಎಸ್ ಹಾಗೂ ಅಮಿತ್ ಶಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾರೈಸಿದ್ದಾರೆ.
ಮಾನ್ಯ ಮುಖ್ಯಮಂತ್ರಿ @BSYBJP ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.@CMofKarnataka
1/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 3, 2020
Advertisement
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ, ಮುಖ್ಯಮಂತ್ರಿ ಬಿಎಸ್ವೈ ಅವರಿಗೆ ಕೊರೊನಾ ಸೋಂಕು ತಗುಲಿರುವ ವಿಷಯ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಗಿದೆ. ಅವರು ಶೀಘ್ರ ಗುಣಮುಖರಾಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
Advertisement
ಕೇಂದ್ರ ಗೃಹ ಸಚಿವ @AmitShah ಅವರೂ ಕೂಡ ಕೊರೋನಾ ಸೋಂಕಿನಿಂದ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಜನ ಸೇವೆಯಲ್ಲಿ ತೊಡಗಿರುವ ಜನಪ್ರತಿನಿಧಿಗಳು ಅತ್ಯಂತ ಎಚ್ಚರಿಕೆಯಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ.
2/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 3, 2020
Advertisement
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಕೂಡ ಕೊರೊನಾ ಸೋಂಕಿನಿಂದ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಜನ ಸೇವೆಯಲ್ಲಿ ತೊಡಗಿರುವ ಜನಪ್ರತಿನಿಧಿಗಳು ಅತ್ಯಂತ ಎಚ್ಚರಿಕೆಯಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಈ ಮೂಲಕ ಮನವಿ ಮಾಡಿಕೊಳ್ಳುವುದಾಗಿ ತಿಳಿಸಿದರು.
Advertisement
ಮುಖ್ಯಮಂತ್ರಿ, ಸಚಿವರು ಹಾಗೂ ಈ ಮಾರಕ ಸೋಂಕು ತಗುಲಿರುವ ಜನತೆ ಶೀಘ್ರ ಚೇತರಿಸಿಕೊಂಡು, ಈ ಸೋಂಕು ಮೆಟ್ಟಿನಿಲ್ಲುವ ಶಕ್ತಿ ದಯಪಾಲಿಸುವಂತೆ ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಎಲ್ಲರ ಪ್ರಾರ್ಥನೆ, ಆಶೀರ್ವಾದ, ಸದಾಶಯ ನಿಮ್ಮೊಂದಿಗೆ ಇದೆ.
3/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 3, 2020
ಮುಖ್ಯಮಂತ್ರಿ, ಸಚಿವರು ಹಾಗೂ ಈ ಮಾರಕ ಸೋಂಕು ತಗುಲಿರುವ ಜನತೆ ಶೀಘ್ರ ಚೇತರಿಸಿಕೊಂಡು, ಈ ಸೋಂಕು ಮೆಟ್ಟಿನಿಲ್ಲುವ ಶಕ್ತಿ ದಯಪಾಲಿಸುವಂತೆ ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಎಲ್ಲರ ಪ್ರಾರ್ಥನೆ, ಆಶೀರ್ವಾದ, ಸದಾಶಯ ನಿಮ್ಮೊಂದಿಗೆ ಇದೆ ಎಂದು ಹೆಚ್ಡಿಕೆ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.