ಚಾಮರಾಜನಗರ: ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮನನೊಂದ ಅಭಿಮಾನಿ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ರವಿ (35) ಮೃತ ವ್ಯಕ್ತಿ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ನಿವಾಸಿಯಾದ ಈತ ಬಿಎಸ್‍ವೈ ಅಭಿಮಾನಿಯಾಗಿದ್ದನು. ನಿನ್ನೆ ರಾಜೀನಾಮೆ ನೀಡಿರುವ ಕುರಿತಾಗಿ ಮನನೊಂದು ನೇಣಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ ಬಿ.ಎಸ್.ಯಡಿಯೂರಪ್ಪ
ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ರವಿ ಯಡಿಯೂರಪ್ಪನವರ ಅಪ್ಪಟ ಅಭಿಮಾನಿಯಾಗಿದ್ದನು. ನಿನ್ನೆ ಬಿಎಸ್‍ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕ್ಷಣದಿಂದ ಸಾಕಷ್ಟು ನೊಂದಿದ್ದ. ನಿನ್ನೆ ಹೋಟೆಲಿನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.