ಬೆಂಗಳೂರು: ಬಿಜೆಪಿ ಮನೆಯಲ್ಲಿ ಖಾತೆ ಕಚ್ಚಾಟ ನಡೆಯುತ್ತಿದ್ದರೆ ಇತ್ತ ಕಾಂಗ್ರೆಸ್ ಮನೆಯಲ್ಲಿ ಕಾರ್ಯಾಧ್ಯಕ್ಷ ವಿಚಾರವಾಗಿ ಅಸಮಾಧಾನ ಸ್ಫೋಟವಾಗಿದೆ.
ಕೆಪಿಸಿಸಿಗೆ ರಾಮಲಿಂಗಾರೆಡ್ಡಿ ಹಾಗೂ ಧ್ರುವನಾರಾಯಣ್ ಅವರನ್ನು ಹೆಚ್ಚುವರಿ ಕಾರ್ಯಾಧ್ಯಕ್ಷರನ್ನು ನೇಮಿಸಿದ್ದು, ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗರಂ ಆಗಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರಿಗೆ ಕರೆ ಮಾಡಿದ ಡಿಕೆಶಿ, ಈಗಾಗಲೇ ಮೂವರು ಕಾರ್ಯಾಧ್ಯಕ್ಷರ ನೇಮಕವಾಗಿದೆ. ಇನ್ನು ಹೆಚ್ಚುವರಿ ಇಬ್ಬರ ನೇಮಕ ಅಗತ್ಯವಿತ್ತಾ ಎಂಬುದಾಗಿ ಪ್ರಶ್ನೆ ಮಾಡಿದ್ದಾರೆ.
ನೇಮಕದ ಹಿಂದೆ ರಾಜ್ಯ ಕಾಂಗ್ರೆಸ್‍ನ ಮಾಜಿ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕೈವಾಡವಿದೆ. ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ.