– ಕಾಂಗ್ರೆಸ್, ಜೆಡಿಎಸ್ ಪರವಾಗಿ ಪ್ರಚಾರ ಮಾಡಿದ್ದಾರೆ
ಮಡಿಕೇರಿ: ಡ್ರಗ್ಸ್ ದಂಧೆ ವಿಚಾರದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ರಾಗಿಣಿಗೆ ರಾಜಕೀಯ ಬೆಂಬಲ ಇದ್ದಿದ್ದರೆ ಅರೆಸ್ಟ್ ಆಗ್ತಿರಲಿಲ್ಲ: ವಿಜಯೇಂದ್ರ
ಕೊಡಗು ಜಿಲ್ಲೆಯ ಬಲಮುರಿಯಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಅಡಿಯಲ್ಲಿ ರಸ್ತೆ ಕಾಮಗಾರಿಗೆ ಪ್ರತಾಪ್ ಸಿಂಹ ಭೂಮಿ ಪೂಜೆ ನೆರವೇರಿಸಿದ್ದಾರೆ. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪ್ರತಾಪ್ ಸಿಂಹ, ಚುನಾವಣೆ ಸಂದರ್ಭದಲ್ಲಿ ಸಿನಿಮಾ ತಾರೆಯರನ್ನು ಕರೆದುಕೊಂಡು ಬಂದು ಪ್ರಚಾರ ಮಾಡುವುದು ಸಾಮಾನ್ಯವಾಗಿದೆ. ಇದನ್ನು ಎಲ್ಲಾ ಪಕ್ಷಗಳು ಮಾಡಿವೆ. ಒಂದೇ ಚುನಾವಣೆಯಲ್ಲಿ ಸಿನಿಮಾ ತಾರೆಯರು ಮೂರು ಪಕ್ಷಗಳ ಕ್ಯಾಂಪೇನ್ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಜಮೀರ್, ರಾಗಿಣಿ ಯಾರೇ ಆಗಲಿ-ಡ್ರಗ್ಸ್ ಮಾಫಿಯಾ ಕುರಿತು ತನಿಖೆ ಮಾಡಲಿ: ಸಿದ್ದರಾಮಯ್ಯ
Advertisement
ಕೆ.ಆರ್.ಪೇಟೆಯಲ್ಲಿ ಚುನಾವಣೆ ಸಂದರ್ಭದಲ್ಲಿ ನಟಿ ರಾಗಿಣಿ ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದರು. ಈ ಹಿಂದೆ ರಾಗಿಣಿ ಕಾಂಗ್ರೆಸ್ ಮತ್ತು ಜೆಡಿಎಸ್ ಪರವಾಗಿ ಚುನಾವಣಾ ಪ್ರಚಾರ ಮಾಡಿದ್ದಾರೆ. ಈಗಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರ ಜೊತೆ ರಾಗಿಣಿ ಇರುವ ಫೋಟೋಗಳು ಇವೆ. ಹಾಗೆಂದ ಮಾತ್ರಕ್ಕೆ ಅದಕ್ಕೆ ರಾಜಕೀಯ ಬಣ್ಣ ಬಳಿಯಬೇಕಾಗಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.
Advertisement
Advertisement
ಡ್ರಗ್ಸ್ ಎನ್ನೋದು ಸಾಮಾಜಿಕ ಪಿಡುಗಾಗಿ ಕಾಡುತ್ತಿದೆ. ಈಗ ನಾವೆಲ್ಲರೂ ಪಕ್ಷ ಭೇದ ಮರೆತು ಡ್ರಗ್ಸ್ ಮಾರಾಟ ಮತ್ತು ಸೇವನೆ ವಿರುದ್ಧ ಹೋರಾಡಬೇಕಾಗಿದೆ. ಈಗಾಗಲೇ ನಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಡ್ರಗ್ಸ್ ಮಾರಾಟ ಮತ್ತು ಸೇವನೆ ವಿರುದ್ಧ ಹೋರಾಡಿ, ಜನರನ್ನು ಎಚ್ಚರಗೊಳಿಸಲು ಟ್ವಿಟ್ಟರಿನಲ್ಲಿ ಅಭಿಯಾನ ಆರಂಭಿಸಿದ್ದಾರೆ. ಪಕ್ಷ ಅದಕ್ಕಾಗಿ ಕೆಲಸ ಮಾಡಲಿದೆ. ಯಾವ ಪಕ್ಷ ಅಥವಾ ಯಾರೇ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದರು ನಿರ್ದಾಕ್ಷಿಣ್ಯ ಕ್ರಮ ಆಗಲಿದೆ ಎಂದರು.
Advertisement
ಮೊದಲಿಗೆ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ನಟಿ ರಾಗಿಣಿಯನ್ನು ಬಂಧಿಸಲಾಗಿತ್ತು. ನಂತರ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಗರದ 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆದಿತ್ತು. ಈ ವೇಳೆ 10 ದಿನ ನಮ್ಮ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿದ್ದರು. ಸಿಸಿಬಿ ವಕೀಲರ ವಾದವವನ್ನು ಆಲಿಸಿದ ಬಳಿಕ ನ್ಯಾ.ಜಗದೀಶ್ ಅವರು 5 ದಿನ ಕಸ್ಟಡಿಗೆ ನೀಡಿದ್ದಾರೆ. ಹೀಗಾಗಿ ಕೋರ್ಟ್ ಆದೇಶದ ಅನ್ವಯ ಶುಕ್ರವಾರದವರೆಗೂ ರಾಗಿಣಿ ಸಿಸಿಬಿ ಪೊಲೀಸರ ವಶದಲ್ಲಿ ಇರಲಿದ್ದಾರೆ.
ಇನ್ನೂ ನಟಿ ಸಂಜನಾ ಆಪ್ತ ರಾಹುಲ್ ಹೇಳಿಕೆಯಿಂದಾಗಿ ಮಂಗಳವಾರ ಬೆಳಗ್ಗೆ ಸಿಸಿಬಿ ಅಧಿಕಾರಿಗಳು ಸಂಜನಾ ಮನೆ ಮೇಲೆ ದಾಳಿ ಮಾಡಿದ್ದರು. ಹಲವು ಗಂಟೆ ಶೋಧ ಕಾರ್ಯ ನಡೆಸಿ, ಸಂಜನಾರನ್ನು ಅರೆಸ್ಟ್ ಮಾಡಿದ್ದಾರೆ. ಎಫ್‍ಐಆರ್‍ನಲ್ಲಿ ಸಂಜನಾರನ್ನು ಎ-14 ಎಂದು ಉಲ್ಲೇಖಿಸಲಾಗಿದೆ. ಡ್ರಗ್ ಮಾಫಿಯಾ ಜೊತೆ ನಂಟಿರುವ ಅನುಮಾನದ ಮೇಲೆ ತೀವ್ರ ವಿಚಾರಣೆ ನಡೆಸಲಾಗಿದೆ. ಮೆಡಿಕಲ್ ಚೆಕಪ್ ಬಳಿಕ ವಸಂತನಗರದ ಸ್ಪೆಷಲ್ ರಿಮ್ಯಾಂಡ್ ಕೋರ್ಟ್ ಗೆ ಹಾಜರುಪಡಿಸಿ ಸಂಜನಾರನ್ನು ಐದು ದಿನ ಕಸ್ಟಡಿಗೆ ಪಡೆದುಕೊಂಡಿದೆ.